ಚುನಾವಣಾ ಪೂರ್ವ ಮೈತ್ರಿಗೆ ಎಂಜಿಪಿ ಅವಮಾನ: ಜಿಎಎಸ್ಎಂ ಅಸಮಾಧಾನ
ಗೋವಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿರುವ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ(ಎಂಜಿಪಿ) ನಡೆಗೆ ಗೋವಾ ಸುರಕ್ಷ ಮಂಚ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಚುನಾವಣಾ ಪೂರ್ವ ಮೈತ್ರಿಗೆ ಎಂಜಿಪಿ ಅವಮಾನ ಮಾಡಿದೆ ಎಂದಿದೆ.

Published On :
ಪಣಜಿ: ಗೋವಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿರುವ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ(ಎಂಜಿಪಿ) ನಡೆಗೆ ಗೋವಾ ಸುರಕ್ಷ ಮಂಚ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಚುನಾವಣಾ ಪೂರ್ವ ಮೈತ್ರಿಗೆ ಎಂಜಿಪಿ ಅವಮಾನ ಮಾಡಿದೆ ಎಂದಿದೆ.
ಸರ್ಕಾರ ರಚನೆಗೆ ಬಿಜೆಪಿಯೊಂದಿಗೆ ಕೈ ಜೋಡಿಸುವ ಮೂಲಕ ಎಂಜಿಪಿ ಗೋವಾ ಸುರಕ್ಷ ಮಂಚ್ ನೊಂದಿಗಿನ ಮೈತ್ರಿಗೆ ಅವಮಾನ ಮಾಡಿದೆ ಎಂದು ಜಿಎಸ್ ಎಂ ಅಧ್ಯಕ್ಷ ಆನಂದ್ ಶಿರೋಡ್ಕರ್ ಹೇಳಿದ್ದಾರೆ.
ಚುನಾವಣೆಗೂ ಮುನ್ನ ಬಿಜೆಪಿಯೊಂದಿಗಿನ ಮೈತ್ರಿಯನ್ನು ತೊರೆದಿದ್ದ ಎಂಜಿಪಿ, ನಂತರ ಜಿಎಸ್ ಎಂ ನೊಂದಿಗೆ ಮೈತ್ರಿಗೆ ಮುಂದಾಗಿತ್ತು. ಆದರೆ ಈಗ ಮನೋಹರ್ ಪರಿಕ್ಕರ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಬೆಂಬಲ ಘೋಷಿಸಿದೆ ಈ ಹಿನ್ನೆಲೆಯಲ್ಲಿ ಜಿಎಸ್ಎಂ ಅಸಮಾಧಾನ ವ್ಯಕ್ತಪಡಿಸಿದ್ದು ಚುನಾವಣಾ ಪೂರ್ವ ಮೈತ್ರಿಗೆ ಎಂಜಿಪಿ ಅವಮಾನ ಮಾಡಿದೆ ಎಂದು ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬಿಜೆಪಿ ಸರ್ಕಾರGoaಗೋವಾBJP governmentMaharashtrawadi Gomantak PartyGoa Suraksha Manchಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷಗೋವಾ ಸುರಕ್ಷಾ ಮಂಚ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


