ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ: ಎಚ್ಚರಿಕೆ ನೀಡಿದ ಅಧಿಕಾರಿಗಳು
ಹಿಮಾಚಲ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವಡೆ ಭಾರೀ ಹಿಮಪಾತವಾಗುತ್ತಿದ್ದು, ಹಿಮಪಾತವಾಗುವ ಕುರಿತು ಅಧಿಕಾರಿಗಳು ಸೋಮವಾರ ಎಚ್ಚರಿಕೆ ನೀಡಿದ್ದಾರೆ...

Published On :
ಶಿಮ್ಲಾ: ಹಿಮಾಚಲ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವಡೆ ಭಾರೀ ಹಿಮಪಾತವಾಗುತ್ತಿದ್ದು, ಹಿಮಪಾತವಾಗುವ ಕುರಿತು ಅಧಿಕಾರಿಗಳು ಸೋಮವಾರ ಎಚ್ಚರಿಕೆ ನೀಡಿದ್ದಾರೆ.
ಶಿಮ್ಲಾ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಾದ ಕಂಗ್ರಾ ಮತ್ತು ಸಿರ್ಮೌರ್ ನ ಛುರ್ಧಾರ್, ಧೌಲಧಾರ್ ನಲ್ಲಿ ಭಾರೀ ಹಿಮಪಾತವಾಗುತ್ತಿದೆ. ಹೀಗಾಗಿ ಇನ್ನು ಮೂರು ದಿನಗಳಲ್ಲಿ ಹಿಮಪಾತವಾಗುವ ಸಾಧ್ಯತೆಗಳಿದ್ದು, ಪರಿಸ್ಥಿತಿ ಎದುರಿಸಲು ಸಿದ್ಧರಾಗಿರುವಂತೆ ವಿಪತ್ತು ನಿರ್ವಹಣೆಯ ವಿಶೇಷ ಕಾರ್ಯದರ್ಶಿ ಡಿಡಿ ಶರ್ಮಾ ಅವರು ಹೇಳಿದ್ದಾರೆ.
ಭಾರೀ ಹಿಮಪಾತದಿಂದಾಗಿ ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಶಿಮ್ಲಾ, ಕುಲ್ಲು ಜಿಲ್ಲೆಗಳು ಮತ್ತು ಬುಡಕಟ್ಟು ಜನಾಂಗದವರ ಪ್ರದೇಶಗಳಲ್ಲಿರುವ 50 ರಸ್ತೆಗಳು ಬಂದ್ ಆಗಿವೆ. ಹಲವೆಡೆ ವಿದ್ಯುತ್ ಸೇವೆ ಹಾಗೂ ಮೊಬೈಲ್ ನೆಟ್ ವರ್ಕ್ ಸೇವೆಗಳೂ ಕೂಡ ಕಡಿತಗೊಂಡಿರುವುದಾಗಿ ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


