ದೇಶ

ಗೋವಾ ಮುಖ್ಯಮಂತ್ರಿಯಾಗಿ ಮನೋಹರ್ ಪರಿಕ್ಕರ್ ನಾಳೆ ಅಧಿಕಾರ ಸ್ವೀಕಾರ

ಗೋವಾದ ನೂತನ ಮುಖ್ಯಮಂತ್ರಿಯಾಗಿ ಮನೋಹರ್ ಪರಿಕ್ಕರ್ ನಾಳೆ ಸಂಜೆ 5 ಗಂಟೆಗೆ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ...

ಗೋವಾ ಮುಖ್ಯಮಂತ್ರಿಯಾಗಿ ಮನೋಹರ್ ಪರಿಕ್ಕರ್ ನಾಳೆ ಅಧಿಕಾರ ಸ್ವೀಕಾರ
ಮನೋಹರ್ ಪರಿಕ್ಕರ್(ಸಂಗ್ರಹ ಚಿತ್ರ)
Published On :
ಪಣಜಿ: ಗೋವಾದ ನೂತನ ಮುಖ್ಯಮಂತ್ರಿಯಾಗಿ ಮನೋಹರ್ ಪರಿಕ್ಕರ್ ನಾಳೆ ಸಂಜೆ 5 ಗಂಟೆಗೆ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. 
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 15 ದಿನಗಳೊಳಗೆ ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲ ಮ್ರಿದುಲಾ ಸಿನ್ಹಾ ತಿಳಿಸಿದ್ದಾರೆ ಎಂದು ಗವರ್ನರ್ ಅವರ ಕಾರ್ಯದರ್ಶಿ ರೂಪೇಶ್ ಕುಮಾರ್ ಠಾಕೂರ್ ತಿಳಿಸಿದ್ದಾರೆ.ನಿನ್ನೆ ರಾಜ್ಯಪಾಲರನ್ನು ಭೇಟಿ ಮಾಡಿದ್ದ ಪರಿಕ್ಕರ್ 21 ಶಾಸಕರ ಬೆಂಬಲದ ಪತ್ರವನ್ನು ನೀಡಿದ್ದರು ಎಂದು ಕೂಡ ಅವರು ಹೇಳಿದ್ದಾರೆ. 
13 ಶಾಸಕರನ್ನು ಹೊಂದಿರುವ ಬಿಜೆಪಿಗೆ ಗೋವಾ ಫಾರ್ವರ್ಡ್ ಪಕ್ಷದ ಮತ್ತು ಮಹಾರಾಷ್ಟ್ರವಾಡಿ ಗೋಮಂಟಕ್ ಪಕ್ಷದ ತಲಾ ಮೂವರು ಶಾಸಕರು ಹಾಗೂ ಇಬ್ಬರು ಸ್ವತಂತ್ರ ಶಾಸಕರು ಬೆಂಬಲ ನೀಡಿದ್ದಾರೆ.
ಪರಿಕ್ಕರ್ ಅವರು ಗೋವಾ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮುನ್ನ ರಕ್ಷಣಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.