ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ...

Published On :
ಮಲ್ಟಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ಸೋಮವಾರ ತಿಳಿದುಬಂದಿದೆ.
ಭಾರತೀಯ ಸೇನೆ ಮೇಲೆ 82ಎಂಎಂ ಮಾರ್ಟರ್ ಶೆಲ್ ಗಳ ದಾಳಿ ನಡೆಸಲಾಗುತ್ತಿದ್ದು, ಕಳೆದ ಮೂರು ದಿನಗಳಲ್ಲಿ ಎರಡು ಬಾರಿ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘನೆ ಮಾಡಿದೆ.
ಗಡಿಯಲ್ಲಿ ಪಾಕಿಸ್ತಾನ ಸೇನೆ ನಾಲ್ಕು ಗ್ರಾಮಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಯಾವುದೇ ಸಾವು-ನೋವುಗಳ ಸಂಭವಿಸಿಲ್ಲ.
ನಿನ್ನೆ ಕೂಡ ಪಾಕಿಸ್ತಾನ ಸೇನೆ ಪೂಂಚ್ ಜಿಲ್ಲೆಯ ಘಟಿ ಸೆಕ್ಟರ್ ಬಳಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿತ್ತು. ಪ್ರಸ್ತುತ ಗಡಿಯಲ್ಲಿ ಪಾಕಿಸ್ತಾನ ಸೇನಾ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian ArmyPakistanಪಾಕಿಸ್ತಾನCeasefire ViolationKashmirPoonchಪೂಂಚ್ಕಾಶ್ಮೀರಕದನ ವಿರಾಮ ಉಲ್ಲಂಘನೆಭಾರತೀಯ ಸೇನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


