ಅಂಡಮಾನ್ ದ್ವೀಪದಲ್ಲಿ ಪ್ರಬಲ ಭೂಕಂಪನ; ರಿಕ್ಟರ್ ಮಾಪಕದಲ್ಲಿ 5.9ರಷ್ಟು ತೀವ್ರತೆಯ ದಾಖಲು
ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಮಂಗಳವಾರ ಬೆಳಗ್ಗೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆ ದಾಖಲಾಗಿದೆ.

ಪೋರ್ಟ್ಬ್ಲೇರ್: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಮಂಗಳವಾರ ಬೆಳಗ್ಗೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆ ದಾಖಲಾಗಿದೆ.
ನಿಕೋಬಾರ್ ದ್ವೀಪ ಸಮೂಹ ಭೂಗರ್ಭದ ಸುಮಾರು 10 ಕಿ.ಮೀ. ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದ್ದು, ಮಂಗಳವಾರ ಬೆಳಗ್ಗೆ 8.21ರ ಸುಮಾರಿಗೆ ಭೂಕಂಪನ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಸಂಭವಿಸಿರುವ ಕಂಪನ ಪ್ರಬಲವೇ ಆಗಿದ್ದರೂ ಸುನಾಮಿ ಅಲೆಗಳನ್ನು ಸೃಷ್ಟಿಸುವಷ್ಟು ಪ್ರಬಲವಲ್ಲ. ಹೀಗಾಗಿ ಸುನಾಮಿ ಏಳುವ ಸಾಧ್ಯತೆ ಕಡಿಮೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ಭೂಕಂಪನದಿಂದಾಗಿ ಜೀವಹಾನಿ ಮತ್ತು ಆಸ್ತಿಗಳಿಗೆ ಹಾನಿಯಾಗಿರುವ ಕುರಿತು ಈವರೆಗೂ ಯಾವುದೇ ರೀತಿಯ ಮಾಹಿತಿಗಳು ದೊರೆತಿಲ್ಲ. ಅಧಿಕಾರಿಗಳು ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಇದೇ ವೇಳೆ ಮಂಗಳವಾರ ಬೆಳಗ್ಗೆ 5.48 ರ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲೂ ಲಘು ಪ್ರಮಾಣದ ಅಂದರೆ 3.6 ತೀವ್ರತೆಯ ಭೂಕಂಪನ ಸಂಭವಿಸಿತ್ತು.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


