ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಸಾಧನೆ; ಬಿಕೆ ಹರಿಪ್ರಸಾದ್ ರಾಜಿನಾಮೆ
ಪಂಚರಾಜ್ಯಗಳ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಹೊಗೆಯಾಡುತ್ತಿದ್ದು, ಒಡಿಶಾ ರಾಜ್ಯದ ಉಸ್ತುವಾರಿ ನಾಯಕ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಕೆ ಹರಿ ಪ್ರಸಾದ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಪಂಚರಾಜ್ಯಗಳ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಹೊಗೆಯಾಡುತ್ತಿದ್ದು, ಒಡಿಶಾ ರಾಜ್ಯದ ಉಸ್ತುವಾರಿ ನಾಯಕ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಕೆ ಹರಿ ಪ್ರಸಾದ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಒಡಿಶಾ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಬಿಕೆ ಹರಿ ಪ್ರಸಾದ್ ಅವರು ಸಕ್ರಿಯರಾಗಿ ಪಾಲ್ಗೊಳ್ಳುತ್ತಿಲ್ಲ. ಇದೇ ಕಾರಣಕ್ಕೆ ಪಂಚಾಯತ್ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾಯಿತು ಎಂದು ಒಡಿಶಾದ ಹಲವು ಶಾಸಕರು ದೂರಿದ್ದರು. ಅಂತೆಯೇ ಹರಿಪ್ರಸಾದ್ ಅವರನ್ನು ಬದಲಿಸಿ ರಾಜ್ಯದ ಉಸ್ತುವಾರಿಯನ್ನು ಸಮರ್ಥನಾಯಕರಿಗೆ ನೀಡಬೇಕು ಎಂದು ಒಡಿಶಾ ಕಾಂಗ್ರೆಸ್ ನ ಯುವ ಘಟಕ ಆಗ್ರಹಿಸಿತ್ತು. ಈ ಹಿಂದೆ ಒಡಿಶಾ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಹರಿಚರಣ್ ರೊಂದಿಗೆ ಖಾಸಗಿ ಹೊಟೆಲ್ ನಲ್ಲಿ ಸಮಾಲೋಚನೆ ನಡೆಸುತ್ತಿದ್ದಾಗ ಹೊಟೆಲ್ ಗೇ ನುಗ್ಗಿದ್ದ ಕಾಂಗ್ರೆಸ್ ಕಾರ್ಯಕರ್ತರು ಬಿಕೆ ಹರಿಪ್ರಸಾದ್ ಅವರ ವಿರುದ್ಧ ಘೋಷಣೆ ಕೂಗಿದ್ದರು.
ಈ ಎಲ್ಲ ಬೆಳವಣಿಗೆಗಳು ಬಿಕೆ ಹರಿ ಪ್ರಸಾದ್ ಅವರ ರಾಜಿನಾಮೆ ಕಾರಣ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


