ದೇಶ

ಸುಪ್ರೀಂ ಆದೇಶ ಮಹತ್ವದ ಜಯ: ಕಾಂಗ್ರೆಸ್; ಪ್ರಮಾಣ ವಚನದ ನಂತರ ಪ್ರತಿಕ್ರಿಯೆ: ಮನೋಹರ್ ಪರಿಕ್ಕರ್

ಗೋವಾದಲ್ಲಿ ಬಿಜೆಪಿ ಸರ್ಕಾರ ರಚನೆಯ ಕುರಿತು ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, ಬಹುಮತ ಸಾಬೀತುಪಡಿಸುವಂತೆ ಸೂಚಿಸಿರುವುದು ಮಹತ್ವದ ಜಯ ಎಂದು ಹೇಳಿದೆ.

ಸುಪ್ರೀಂ ಆದೇಶ ಮಹತ್ವದ ಜಯ: ಕಾಂಗ್ರೆಸ್; ಪ್ರಮಾಣ ವಚನದ ನಂತರ ಪ್ರತಿಕ್ರಿಯೆ: ಮನೋಹರ್ ಪರಿಕ್ಕರ್
ಸುಪ್ರೀಂ ಕೋರ್ಟ್
Published On :
ಪಣಜಿ: ಗೋವಾದಲ್ಲಿ ಬಿಜೆಪಿ ಸರ್ಕಾರ ರಚನೆಯ ಕುರಿತು ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, ಬಹುಮತ ಸಾಬೀತುಪಡಿಸುವಂತೆ ಸೂಚಿಸಿರುವುದು ಮಹತ್ವದ ಜಯ ಎಂದು ಹೇಳಿದೆ. 
ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮನೋಹರ್ ಪರಿಕ್ಕರ್, ಸದನದಲ್ಲಿ ಬಹುಮತ ಸಾಬೀತುಪಡಿಸುವ ವೇಳೆಯಲ್ಲಿ ಪ್ರತಿಕ್ರಿಯೆ ನೀಡುವುದಾಗಿ ಹೇಳಿದ್ದಾರೆ. ಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಕಾಂಗ್ರೆಸ್ ನ ವಿಜಯ ಎಂದು ಹೇಳಿದ್ದಾರೆ. 
ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸರ್ಕಾರ ರಚನೆಗೆ ತಡೆ ನೀಡುವುದಕ್ಕೆ ನಿರಾಕರಿಸಿದ್ದು, ಸದನದ ಅತಿ ಹಿರಿಯ ಶಾಸಕರು ತತ್ಕಾಲದ ಸಭಾಧ್ಯಕ್ಷರಾಗಬೇಕು ಹಾಗೂ ಸರ್ಕಾರ ರಚನೆಯಾದ ತಕ್ಷಣವೇ ನಿಯೋಜಿತ ಮನೋಹರ್ ಪರಿಕ್ಕರ್ ಬಹುಮತ ಸಾಬೀತು ಪಡಿಸಬೇಕೆಂದು ಮಹತ್ವದ ಆದೇಶ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.