ಮಣಿಪುರ, ಗೋವಾದಲ್ಲಿ ಬಿಜೆಪಿ ಸರ್ಕಾರ ರಚನೆ ವಿರೋಧಿಸಿ ಸಂಸತ್ ನಲ್ಲಿ ಕಾಂಗ್ರೆಸ್ ನಿಂದ ನಿಲುವಳಿ ಮಂಡನೆ?
ಗೋವಾ ಹಾಗೂ ಮಣಿಪುರದಲ್ಲಿ ಎರಡನೇ ಸ್ಥಾನ ಗಳಿಸಿದ್ದರೂ ಸರ್ಕಾರ ರಚನೆಗೆ ಮುಂದಾಗಿರುವ ಬಿಜೆಪಿ ಕ್ರಮವನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಸಂಸತ್ ನಲ್ಲಿ ನಿಲುವಳಿ ಸೂಚನೆ ಮಂಡನೆ ಮಾಡಲು ನಿರ್ಧರಿಸಿದೆ.

Published On :
ನವದೆಹಲಿ: ಗೋವಾ ಹಾಗೂ ಮಣಿಪುರದಲ್ಲಿ ಎರಡನೇ ಸ್ಥಾನ ಗಳಿಸಿದ್ದರೂ ಸರ್ಕಾರ ರಚನೆಗೆ ಮುಂದಾಗಿರುವ ಬಿಜೆಪಿ ಕ್ರಮವನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಸಂಸತ್ ನಲ್ಲಿ ನಿಲುವಳಿ ಸೂಚನೆ ಮಂಡನೆ ಮಾಡಲು ನಿರ್ಧರಿಸಿದೆ.
ಕಾಂಗ್ರೆಸ್ ನ ಆಂತರಿಕ ಮೂಲಗಳ ಪ್ರಕಾರ ಲೋಕಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಸಂಸದರು ನಿಲುವಳಿ ಸೂಚನೆ ಮಂಡಿಸಲಿದ್ದಾರೆ. ನಂತರ ಗೋವಾ, ಮಣಿಪುರಗಳಲ್ಲಿ ಅತಿ ದೊಡ್ಡ ಪಕ್ಷವನ್ನು ಕಡೆಗಣಿಸಿ ಎರಡನೇ ಸ್ಥಾನದಲ್ಲಿರುವ ಪಕ್ಷಕ್ಕೆ ಸರ್ಕಾರ ರಚನೆಗೆ ಆಹ್ವಾನ ನೀಡಿರುವ ಬಗ್ಗೆ ಚರ್ಚೆಗೆ ಆಗ್ರಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಗೋವಾ ಮಣಿಪುರದಲ್ಲಿ ಬಿಜೆಪಿ ಎರಡನೇ ಸ್ಥಾನದಲ್ಲಿದ್ದರೆ, ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಎರಡೂ ರಾಜ್ಯಗಳಲ್ಲಿ ಪಕ್ಷೇತರರು ಹಾಗೂ ಇತರ ಪಕ್ಷಗಳ ಬೆಂಬಲದಿಂದ ಬಿಜೆಪಿ ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. ಬಿಜೆಪಿಯ ನಡೆಯನ್ನು ಕಾಂಗ್ರೆಸ್ ವಿರೋಧಿಸಿದ್ದು, ಗೋವಾದಲ್ಲಿ ತನಗೇ ರಚನೆಗೆ ಅವಕಾಶ ನೀಡಬೇಕೆಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


