ಗೋವಾ ಸರ್ಕಾರ ರಚನೆಗೆ ಬಿಜೆಪಿಗೆ ಅವಕಾಶ ಪ್ರಶ್ನಿಸಿ ಕಾಂಗ್ರೆಸ್ ಅರ್ಜಿ: ಸುಪ್ರೀಂ ನಲ್ಲಿ ವಿಚಾರಣೆ
ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತಿ ದೊಡ್ಡ ಪಕ್ಷವಾಗಿದ್ದರೂ, ಎರಡನೇ ಸ್ಥಾನದಲ್ಲಿರುವ ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ನೀಡಿರುವುದನ್ನು ಕಾಂಗ್ರೆಸ್ ಪ್ರಶ್ನಿಸಿದೆ.

Published On :
ನವದೆಹಲಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತಿ ದೊಡ್ಡ ಪಕ್ಷವಾಗಿದ್ದರೂ, ಎರಡನೇ ಸ್ಥಾನದಲ್ಲಿರುವ ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ನೀಡಿರುವುದನ್ನು ಕಾಂಗ್ರೆಸ್ ಪ್ರಶ್ನಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿದ್ದು, ಕಾಂಗ್ರೆಸ್ ಗೆ ಸರ್ಕಾರ ರಚನೆಗೆ ಅವಕಾಶ ನೀಡಲು ನಿರ್ದೇಶನ ನೀಡಬೇಕೆಂದು ಮನವಿ ಮಾಡಿದೆ.
ಕಾಂಗ್ರೆಸ್ ಅರ್ಜಿಯನ್ನು ವಿಚಾರಣೆಗೆ ಮಾನ್ಯ ಮಾಡಿರುವ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೇಹರ್, ಪ್ರತ್ಯೇಕ ಪೀಠವೊಂದನ್ನು ರಚಿಸಿದ್ದು ಮಾ.14 ರಂದು ಬೆಳಿಗ್ಗೆ 10:30 ಕ್ಕೆ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದರು. ಕೆಲವೇ ಕ್ಷಣಗಳಲ್ಲಿ ವಿಚಾರಣೆ ನಡೆಯಲಿದ್ದು, ಗೋವಾದಲ್ಲಿ ಬಿಜೆಪಿ ಸರ್ಕಾರಕ್ಕೆ ಕಾನೂನು ತೊಡಕು ಎದುರಾಗಲಿದೆಯೇ ಎಂದು ಕಾದು ನೋಡಬೇಕಿದೆ.
40 ವಿಧಾನಸಭಾ ಕ್ಷೇತ್ರಗಳಿರುವ ಗೋವಾದಲ್ಲಿ ಕಾಂಗ್ರೆಸ್ 17 ಸ್ಥಾನಗಳನ್ನು ಗಳಿಸುವ ಮೂಲಕ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಸಾಮಾನ್ಯವಾಗಿ ವಿಧಾನಸಭಾ ಚುನಾವಣೆಗಳಲ್ಲಿ ಅತಂತ್ರ ಫಲಿತಾಂಶ ಪ್ರಕಟವಾದರೆ ಅತಿ ಹೆಚ್ಚು ಸ್ಥಾನ ಗಳಿಸಿರುವ ಪಕ್ಷವನ್ನು ಸರ್ಕಾರ ರಚಿಸಲು ಮೊದಲು ಆಹ್ವಾನಿಸಲಾಗುತ್ತದೆ. ಆದರೆ ಕಾಂಗ್ರೆಸ್ ಗೂ ಮುನ್ನ ಬಿಜೆಪಿ ತನಗೆ ಸರ್ಕಾರ ರಚನೆ ಮಾಡಲು ಬಹುಮತವಿದೆ ಎಂದು ರಾಜ್ಯಪಾಲರಿಗೆ ಪತ್ರ ನೀಡಿದ್ದ ಹಿನ್ನೆಲೆಯಲ್ಲಿ ಗೋವಾ ರಾಜ್ಯಪಾಲರಾದ ಮೃದುಲಾ ಸಿನ್ಹಾ ಬಿಜೆಪಿಗೆ ಸರ್ಕಾರ ರಚನೆ ಮಾಡಲು ಅವಕಾಶ ನೀಡಿ 15 ದಿನಗಳಲ್ಲಿ ಬಹುಮತ ಸಾಬೀತುಪಡಿಸಬೇಕೆಂದು ಶಾಸಕಾಂಗ ಪಕ್ಷದ ಮುಖ್ಯಸ್ಥ ಮನೋಹರ್ ಪರಿಕ್ಕರ್ ಅವರಿಗೆ ಸೂಚಿಸಿದ್ದರು. ಅದರಂತೆಯೇ ಮಾ.14 ರಂದು ಸಂಜೆ ಮನೋಹರ್ ಪರಿಕ್ಕರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


