ದೇಶ

ತುರ್ತು ಭೂಸ್ಪರ್ಶದ ವೇಳೆ ಪಲ್ಟಿ ಹೊಡೆ ವಾಯು ಸೇನೆ ಹೆಲಿಕಾಪ್ಟರ್, ಅದೃಷ್ಟವಶಾತ್ ಪೈಲಟ್ ಗಳು ಪಾರು!

ಭಾರತೀಯ ವಾಯುಪಡೆಗೆ ಸೇರಿದ ಚೇತಕ್‌ ಹೆಲಿಕಾಪ್ಟರ್‌ ಒಂದು ಅಲಹಾಬಾದ್‌ ಸಮೀಪ ತುರ್ತು ಭೂಸ್ಪರ್ಶ ಮಾಡುವ ವೇಳೆ ಮಗುಚಿ ಬಿದ್ದಿದ್ದು, ಅದೃಷ್ಟ ವಶಾತ್ ಪೈಲಟ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತುರ್ತು ಭೂಸ್ಪರ್ಶದ ವೇಳೆ ಪಲ್ಟಿ ಹೊಡೆ ವಾಯು ಸೇನೆ ಹೆಲಿಕಾಪ್ಟರ್, ಅದೃಷ್ಟವಶಾತ್ ಪೈಲಟ್ ಗಳು ಪಾರು!
ಸಂಗ್ರಹ ಚಿತ್ರ
Published On :

ಅಲಹಾಬಾದ್: ಭಾರತೀಯ ವಾಯುಪಡೆಗೆ ಸೇರಿದ ಚೇತಕ್‌ ಹೆಲಿಕಾಪ್ಟರ್‌ ಒಂದು ಅಲಹಾಬಾದ್‌ ಸಮೀಪ ತುರ್ತು ಭೂಸ್ಪರ್ಶ ಮಾಡುವ ವೇಳೆ ಮಗುಚಿ ಬಿದ್ದಿದ್ದು, ಅದೃಷ್ಟ ವಶಾತ್ ಪೈಲಟ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಉತ್ತರ ಪ್ರದೇಶದ ಅಲಹಾಬಾದ್ ನ ಬಾಮ್‌ರೋಲಿ ಎಂಬ ಪ್ರದೇಶಲ್ಲಿ  ತರಬೇತಿ ಕಾರ್ಯದಲ್ಲಿ ನಿರತವಾಗಿದ್ದ ವೇಳೆ ಚೇತಕ್ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ತುರ್ತಾಗಿ ಭೂಸ್ಪರ್ಶಮಾಡ  ಬೇಕಾಯಿತು. ಈ ವೇಳೆ ಹೆಲಿಕಾಪ್ಟರ್ ಮಗುಚಿ ಬಿದ್ದಿದ್ದು, ಹೆಲಿಕಾಪ್ಟರ್‌ನಲ್ಲಿದ್ದ ಇಬ್ಬರೂ ಪೈಲಟ್‌ ಗಳು ಆಶ್ಚರ್ಯಕರ ರೀತಿಯಲ್ಲಿ ಸುರಕ್ಷಿತವಾಗಿ ಪಾರಾಗಿದ್ದಾರೆ. ಹೆಲಿಕಾಪ್ಟರ್‌ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಾಗ ಪೈಲಟ್‌ ಗಳು  ಅದನ್ನು ತುರ್ತಾಗಿ ಕೆಳಗಿಳಿಸಲು ಯತ್ನಿಸಿದರು. ಆಗ ಹೆಲಿಕಾಪ್ಟರ್‌ ಬುಡ ಮೇಲಾಗಿ ನೆಲಕ್ಕುರುಳಿತು.

ಇನ್ನು ಪ್ರಕರಣ ಸಂಬಂಧ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದು, ಹಿರಿಯ ಅಧಿಕಾರಿಗಳಿಗೆ ತನಿಖಾ ಜವಾಬ್ದಾರಿ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.