ದೇಶ

ಕಾನ್ಪುರದಲ್ಲಿ ಕಟ್ಟಡ ಕುಸಿತ, ಅವಶೇಷಗಳಡಿ 24 ಮಂದಿ ಸಿಲುಕಿರುವ ಸಾಧ್ಯತೆ

ಕಾನ್ಪುರ ಜಿಲ್ಲೆಯಲ್ಲಿ ಬುಧವಾರ ಶೀತಲಿಕರಣ ಘಟಕದ ಕಟ್ಟಡ ಕುಸಿದು ಬಿದ್ದಿದ್ದು, ಕಟ್ಟಡದ ಅವಶೇಷಗಳಡಿ ಸುಮಾರು 24 ಮಂದಿ....

ಕಾನ್ಪುರದಲ್ಲಿ ಕಟ್ಟಡ ಕುಸಿತ, ಅವಶೇಷಗಳಡಿ 24 ಮಂದಿ ಸಿಲುಕಿರುವ ಸಾಧ್ಯತೆ
ರೈತರನ್ನು ರಕ್ಷಿಸುತ್ತಿರುವ ಪೊಲೀಸರು
Published On :
ಕಾನ್ಪುರ: ಕಾನ್ಪುರ ಜಿಲ್ಲೆಯಲ್ಲಿ ಬುಧವಾರ ಶೀತಲಿಕರಣ ಘಟಕದ ಕಟ್ಟಡ ಕುಸಿದು ಬಿದ್ದಿದ್ದು, ಕಟ್ಟಡದ ಅವಶೇಷಗಳಡಿ ಕನಿಷ್ಠ 24 ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಲವು ರೈತರು ತಾವು ಬೆಳೆದ ಆಲುಗಡ್ಡೆಯನ್ನು ಶಿವರಾಜ್ ಪುರದಲ್ಲಿರುವ ಶೀತಲಿಕರಣ ಘಟಕದಲ್ಲಿ ಶೇಕರಿಸಿಡಲು ತೆರಳಿದ್ದ ವೇಳೆಯೇ ಈ ಘಟನೆ ನಡೆದಿದೆ.
ಚಿಲ್ಲರ್ ಪ್ಲಾಂಟ್ ನಲ್ಲಿದ್ದ ಗ್ಯಾಸ್ ಸೋರಿಕೆಯಾಗಿ ಸ್ಫೋಟಗೊಂಡ ಪರಿಣಾಮ ಕಟ್ಟಡ ಕುಸಿದು ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಟ್ಟಡದ ಅವಶೇಷಗಳಿಂದ ಈಗಾಗಲೇ ಐವರು ರೈತರು ಹಾಗೂ ಏಳು ಸಿಬ್ಬಂದಿ ಸೇರಿದಂತೆ 12 ಮಂದಿಯನ್ನು ರಕ್ಷಿಸಲಾಗಿದ್ದು, ಕೋಲ್ಡ್ ಸ್ಟೋರೇಜ್ ಮಾಲೀಕ, ಆತನ ಪುತ್ರ ಹಾಗೂ ಕಾರ್ಮಿಕರು ಸೇರಿದಂತೆ ಇನ್ನೂ ಹಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.
ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.