ಉ.ಪ್ರ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮೆ?
ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

Published On :
ನವದೆಹಲಿ: ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ರಾಜೀನಾಮೆ ನೀಡುವುದರ ಬಗ್ಗೆ ರಾಜ್ ಬಬ್ಬರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಉತ್ತರ ಪ್ರದೇಶದಲ್ಲಿ ಉಂಟಾದ ಸೋಲಿಗೆ ನಾನೇ ಹೊಣೆ ಹೊರುತ್ತೇನೆ ಎಂದು ಹೇಳಿದ್ದಾರೆ. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶ್ರಮ ವಹಿಸಿದರೂ, ನಿರೀಕ್ಷೆಗೆ ತಕ್ಕಂತೆ ಕಾಂಗ್ರೆಸ್ ಕೆಲಸ ಮಾಡಲಿಲ್ಲ ಎಂದು ರಾಜ್ ಬಬ್ಬರ್ ಹೇಳಿದ್ದಾರೆ. ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ರಾಜ್ ಬಬ್ಬರ್ ಬಿಜೆಪಿ ಹಣ ಮತ್ತು ತೋಳ್ಬಲದಿಂದ ಗೋವಾ ಹಾಗೂ ಮಣಿಪುರದಲ್ಲಿ ಅಧಿಕಾರ ಹಿಡಿದಿದೆ ಎಂದು ಆರೋಪಿಸಿದ್ದಾರೆ.
ವಿಧಾನಸಭಾ ಚುನಾವಣೆಗೆ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಪಕ್ಷ 403 ಸ್ಥಾನಗಳಲ್ಲಿ ಕೇವಲ 7 ಸ್ಥಾನಗಳನ್ನಷ್ಟೇ ಗೆದ್ದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


