ಪಂಜಾಬ್ ಮತ್ತು ಗೋವಾಗಳಲ್ಲಿನ ಸೋಲನ್ನು ಅರಗಿಸಿಕೊಳ್ಳಲಾಗುತ್ತಿಲ್ಲ: ಕೇಜ್ರಿವಾಲ್
ಪಂಜಾಬ್ ಮತ್ತು ಗೋವಾ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ದಿಸಿದ್ದ ಆಮ್ ಆದ್ಮಿ ಪಕ್ಷದ ಸೋಲನ್ನು ಇನ್ನೂ ಅರಗಿಸಿಕೊಳ್ಳಲಾಗುತ್ತಿಲ್ಲ ಎಂದು ದೆಹಲಿ ...

Published On :
ನವದೆಹಲಿ: ಪಂಜಾಬ್ ಮತ್ತು ಗೋವಾ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ದಿಸಿದ್ದ ಆಮ್ ಆದ್ಮಿ ಪಕ್ಷದ ಸೋಲನ್ನು ಇನ್ನೂ ಅರಗಿಸಿಕೊಳ್ಳಲಾಗುತ್ತಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಮತಗಳ ಎಣಿಕೆ ವೇಳೆ ಅನ್ಯಾಯ ನಡೆದಿದೆ ಎಂದು ಆರೋಪಿಸಿದ್ದಾರೆ. ಪಂಜಾಬ್ ನಲ್ಲಿ ಇವಿಎಂ ಯಂತ್ರಗಳು ದೋಷಪೂರಿತವಾಗಿವೆ ಎಂದು ದೂರಿರುವ ಅವರು ಶೇ.25 ರಿಂದ 30 ರಷ್ಟು ವೋಟುಗಳನ್ನು ಅಕಾಲಿದಳ-ಬಿಜೆಪಿಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಆಪಾದಿಸಿದ್ದಾರೆ.
ಅಕಾಲಿದಳ ಮತ್ತು ಬಿಜೆಪಿಗೆ ನಮ್ಮ ಮತಗಳು ಹಂಚಿಕೆಯಾದ್ದರಿಂದ ನಾವು ಸೋಲನುಭವಿಸಿದೆವು. ಪಂಜಾಬ್ ನಿಂದ ಆಪ್ ಪಕ್ಷವನ್ನು ಹೊರ ಹಾಕುವುದೇ ಅವರ ಉದ್ದೇಶವಾಗಿತ್ತು ಎಂದು ಆರೋಪಿಸಿದ್ದಾರೆ. ಇವಿಎಂ ಯಂತ್ರಗಳಲ್ಲಿ ದೋಷ ಇರುವುದರ ಸಂಬಂಧ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


