ಹಣ ಬಲದೊಂದಿಗೆ ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿ ಸರ್ಕಾರ ರಚನೆ: ರಾಹುಲ್ ವಾಗ್ದಾಳಿ
ಗೋವಾ ಮತ್ತು ಮಣಿಪುರದಲ್ಲಿ ಸರ್ಕಾರ ರಚನೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಹಣ ಬಳಕೆ ಮಾಡಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

Published On :
ಚಂಢಿಗಢ(ಪಂಜಾಬ್): ಗೋವಾ ಮತ್ತು ಮಣಿಪುರದಲ್ಲಿ ಸರ್ಕಾರ ರಚನೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಹಣ ಬಳಕೆ ಮಾಡಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಮಣಿಪುರ, ಗೋವಾ ಮತ್ತು ಪಂಜಾಬ್ ನಲ್ಲಿ ನಾವು(ಕಾಂಗ್ರೆಸ್) ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದಿದ್ದರು. ಹಣ ಬಳಕೆ ಮಾಡುವ ಮೂಲಕ ಬಿಜೆಪಿ ಎರಡು ರಾಜ್ಯಗಳಲ್ಲಿ ಸರ್ಕಾರ ರಚಿಸುತ್ತಿದೆ. ಆದರೆ ಪಂಜಾಬ್ ಜನತೆ ಮಾತ್ರ ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟು ಪಕ್ಷಕ್ಕೆ ಬಹುಮತ ನೀಡಿದ್ದೀರಾ, ನಿಮ್ಮ ಅಭಿವೃದ್ಧಿಗಾಗಿ ನಾವು ಶ್ರಮಿಸುತ್ತೇವೆ ಎಂದರು.
ಗೋವಾ ಮತ್ತು ಮಣಿಪುರ ಮತದಾರರು ಸಹ ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟು ಹೆಚ್ಚು ಸ್ಥಾನಗಳಲ್ಲಿ ನಮ್ಮನ್ನು ಗೆಲ್ಲಿಸಿದ್ದೀರಾ ಆದರೆ ಬಿಜೆಪಿ ಮಾತ್ರ ತನ್ನ ಹಣ ಬಲದ ಮೂಲಕ ಸರ್ಕಾರ ರಚನೆಗೆ ಮುಂದಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


