ದೇಶ

100 ಜನರಿಂದ ಅತ್ಯಾಚಾರಕ್ಕೆ ಒಳಗಾದ ಮಾಡೆಲ್ ಪತ್ತೆಗೆ ಬಾಂಬೆ ಹೈಕೋರ್ಟ್‌ ಆದೇಶ

ಪೊಲೀಸ್‌ ಅಧಿಕಾರಿಗಳು ಸೇರಿದಂತೆ ಸುಮಾರು 100 ಮಂದಿಯಿಂದ ತಾನೂ ಅತ್ಯಾಚಾರಕ್ಕೆ ಒಳಗಾಗಿರುವುದಾಗಿ ಆರೋಪಿಸಿರುವ....

100 ಜನರಿಂದ ಅತ್ಯಾಚಾರಕ್ಕೆ ಒಳಗಾದ ಮಾಡೆಲ್ ಪತ್ತೆಗೆ ಬಾಂಬೆ ಹೈಕೋರ್ಟ್‌ ಆದೇಶ
ಸಾಂದರ್ಭಿಕ ಚಿತ್ರ
Published On :
ಮುಂಬೈ: ಪೊಲೀಸ್‌ ಅಧಿಕಾರಿಗಳು ಸೇರಿದಂತೆ ಸುಮಾರು 100 ಮಂದಿಯಿಂದ ತಾನೂ ಅತ್ಯಾಚಾರಕ್ಕೆ ಒಳಗಾಗಿರುವುದಾಗಿ ಆರೋಪಿಸಿರುವ 16 ವರ್ಷದ ನೇಪಾಳಿ ಮಾಡೆಲ್ ಹಾಗೂ 24 ವರ್ಷದ ದೆಹಲಿ ಮೂಲದ ಮಾಡೆಲ್ ನನ್ನು  ಪತ್ತೆ ಹಚ್ಚುವಂತೆ ಗುರುವಾರ ಮುಂಬೈ ಹೈಕೋರ್ಟ್‌ ಪೊಲೀಸರಿಗೆ ಸೂಚಿಸಿದೆ.
ಅಪ್ರಾಪ್ತ ಬಾಲಕಿ ಹಾಗೂ ಯುವತಿ ತಮ್ಮ ಮೇಲೆ ಅತ್ಯಾಚಾರ ಎಸಗಿ ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಲಾಗಿದೆ ಎಂದು ಆರೋಪಿಸಿದ್ದರು. ಬಳಿಕ ಇಬ್ಬರು ನಾಪತ್ತೆಯಾಗಿದ್ದು, ಅವರನ್ನು ಪತ್ತೆ ಹಚ್ಚಬೇಕು ಮತ್ತು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ದೆಹಲಿ ಮೂಲದ ವಕೀಲ ಅನುಜ ಕಪೂರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಇದು ಗಂಭೀರ ಪ್ರಕರಣವಾಗಿದ್ದು ಮುಂಬೈ ಪೊಲೀಸರು ನಾಪತ್ತೆಯಾಗಿರುವ ಬಾಲಕಿಯನ್ನು ಪತ್ತೆ ಹಚ್ಚುವಂತೆ ನ್ಯಾಯಧೀಶರಾದ ರಂಜಿತ್ ಮೋರೆ ಮತ್ತು ರೇವತಿ ದೆರೆ ಪೊಲೀಸರಿಗೆ ಸೂಚಿಸಿದ್ದಾರೆ.
ಈ ಪ್ರಕರಣದಲ್ಲಿ ಪೊಲೀಸ್‌ ಅಧಿಕಾರಿಗಳು ಮತ್ತು ಪ್ರಭಾವಿ ವ್ಯಕ್ತಿಗಳು ಶಾಮೀಲಾಗಿದ್ದು ಆ ಬಾಲಕಿಯನ್ನು ಕೊಲೆ ಮಾಡಿರಬಹುದು ಎಂದು ಬಾಲಕಿ ಪರ ವಕೀಲರು ಶಂಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕಳೆದ ಆರು ತಿಂಗಳಿಂದ ಸಂತ್ರಸ್ಥ ಬಾಲಕಿಯರನ್ನು ಪತ್ತೆ ಹಚ್ಚುವಲ್ಲಿ ಮಹಾರಾಷ್ಟ್ರ ಪೊಲೀಸರು ವಿಫಲಾವಾಗಿದ್ದಾರೆ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕಪೂರ್ ಮನವಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.