ಉತ್ತರ ಪ್ರದೇಶ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದು ಕೇವಲ ಮೋದಿಗೆ ಮಾತ್ರ ಗೊತ್ತು
ಉತ್ತರ ಪ್ರದೇಶ ಮುಖ್ಯಮಂತ್ರಿ ಗದ್ದುಗೆ ಯಾರು ಏರಲಿದ್ದಾರೆ ಎಂಬ ಕುತೂಹಲಕ್ಕೆ ಇನ್ನೂ ತೆರೆ ಬಿದ್ದಿಲ್ಲ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮುಂದಿನ ಸಿಎಂ ...

Published On :
ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಗದ್ದುಗೆ ಯಾರು ಏರಲಿದ್ದಾರೆ ಎಂಬ ಕುತೂಹಲಕ್ಕೆ ಇನ್ನೂ ತೆರೆ ಬಿದ್ದಿಲ್ಲ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮುಂದಿನ ಸಿಎಂ ಎಂದು ಹೇಳಲಾಗುತ್ತಿತ್ತು. ತಾವು ಮುಖ್ಯಮಂತ್ರಿ ಅಭ್ಯರ್ಥಿಯಲ್ಲ, ಎಲ್ಲಾ ತಪ್ಪು ಕಲ್ಪನೆಗಳು ಎಂದು ಹೇಳುವ ಮೂಲಕ ಸ್ವತಃ ರಾಜನಾಥ್ ಸಿಂಗ್ ಅವರೇ ಈ ಊಹಾಪೋಹಾಗಳಿಗೆ ತೆರೆ ಎಳೆದಿದ್ದಾರೆ. ಹೀಗಾಗಿ ಉತ್ತರ ಪ್ರದೇಶ ಮುಂದಿನ ಸಿಎಂ ಯಾರು ಎಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ.
ಯುಪಿ ಮುಖ್ಯಮಂತ್ರಿಯಾರಾಗಲಿದ್ದಾರೇ ಎಂಬುದರ ಬಗ್ಗೆ ಅನೇಕ ಕೇಂದ್ರ ಸಚಿವರುಗಳಿಗೆ ತಿಳಿದಿಲ್ಲ, ಉತ್ತರ ಪ್ರದೇಶ ಶಾಸಕಾಂಗ ಪಕ್ಷದ ಸಭೆಗೆ ದಿನಾಂರಕ ಕೂಡ ಇನ್ನೂ ನಿಗದಿಯಾಗಿಲ್ಲ.
ಸಂಸತ್ತಿನ ಹೊರಗೆ ಮಾತನಾಡಿದ ರಾಜನಾಥ್ ಸಿಂಗ್ ನಾನು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳುವುದು ಸಂಪೂರ್ಣ ನಿರರ್ಥಕ ಮತ್ತು ಅನಾವಶ್ಯಕ ಮಾತುಗಳು ಎಂದು ಸ್ಪಷ್ಟಪಡಿಸಿದ್ದಾರೆ.
ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಮಿರ್ಜಾಪುರ್ ನಲ್ಲಿ ಭೇಟಿ ಮಾಡಿದ್ದರು. ಸಿಂಗ್ ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನಾಗಿಸಲು ಈ ಸಭೆ ನಡೆಸಲಾಗಿತ್ತು ಎಂಬಮಾತುಗಳು ಕೇಳಿ ಬಂದಿದ್ದವು. ಆದರೆ ಉತ್ತರ ಪ್ರದೇಶದ ಮುಂದಿನ ಸಿಎಂ ಯಾರಾಗುತ್ತಾರೆ ಎಂದು ಕೇಳಿದ ಪ್ರಶ್ನಗೆ ಉತ್ತರಿಸಿರುವ ಕೇಂದ್ರ ಸಂಪುಟದ ಹಲವು ಸಚಿವರು, ಪ್ರಾಮಾಣಿಕವಾಗಿ ಹೇಳುತ್ತೇವೆ, ನಮಗೆ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ತಿಳಿದಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿರಾಜನಾಥ್ ಸಿಂಗ್Chief Ministerಮುಖ್ಯಮಂತ್ರಿಉತ್ತರ ಪ್ರದೇಶRajnath SinghUtthar pradesh
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


