ಪುಲ್ವಾಮದಲ್ಲಿ ಮತ್ತೆ ಉಗ್ರರ ಉಪಟಳ: ಕಾರ್ಯಾಚರಣೆಗಿಳಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದು, ಉಗ್ರರ ಸದೆಬಡಿಯಲು ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸುತ್ತಿದೆ ಎಂದು ಶುಕ್ರವಾರ ತಿಳಿದುಬಂದಿದೆ...

Published On :
ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದು, ಉಗ್ರರ ಸದೆಬಡಿಯಲು ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸುತ್ತಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಪುಲ್ವಾಮ ಜಿಲ್ಲೆಯ ಬತನೂರ್ ಲಸ್ಸಿಪುರ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.
ಉಗ್ರರ ದಾಳಿ ಹಿನ್ನಲೆಯಲ್ಲಿ ಸೇನಾ ಪಡೆ ಇದೀಗ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಉಗ್ರರ ದಾಳಿಗೆ ದಿಟ್ಟ ಉತ್ತರವನ್ನು ನೀಡುತ್ತಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಪುಲ್ವಾಮದಲ್ಲಿ ಭಾರತೀಯ ಸೇನಾ ಪಡೆ ಎನ್ ಕೌಂಟರ್ ನಡೆಸಿತ್ತು. ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


