ದೇಶ

ಹುತಾತ್ಮ ಯೋಧರ ಕುಟುಂಬಕ್ಕೆ ನೆರವು: ನಟ ಅಕ್ಷಯ್'ರನ್ನು ಕೊಂಡಾಡಿದ ರಾಜನಾಥ್, ನಾಯ್ಡು

ಸುಕ್ಮಾ ನಕ್ಸಲರ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರನ್ನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಕೇಂದ್ರ ಸಚಿವ ವೆಂಕಯ್ಯ ನಾಯ್ಡು...

ಹುತಾತ್ಮ ಯೋಧರ ಕುಟುಂಬಕ್ಕೆ ನೆರವು: ನಟ ಅಕ್ಷಯ್'ರನ್ನು ಕೊಂಡಾಡಿದ ರಾಜನಾಥ್, ನಾಯ್ಡು
ಬಾಲಿವುಡ್ ನಟ ಅಕ್ಷಯ್ ಕುಮಾರ್, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಕೇಂದ್ರ ಸಚಿವ ವೆಂಕಯ್ಯ ನಾಯ್ಡು (ಸಂಗ್ರಹ ಚಿತ್ರ)
Published On :
ನವದೆಹಲಿ: ಸುಕ್ಮಾ ನಕ್ಸಲರ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರನ್ನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಶುಕ್ರವಾರ ಕೊಂಡಾಡಿದ್ದಾರೆ. 
ಹುತಾತ್ಮ ಯೋಧರಿಗೆ ಅಕ್ಷಯ್ ನೆರವು ನೀಡಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ರಾಜನಾಥ ಸಿಂಗ್ ಅವರು, ಅಕ್ಷಯ್ ಕುಮಾರ್ ಅವರ ಔದಾರ್ಯತೆಯನ್ನು ಪ್ರಶಂಸಿಸಬೇಕು. ಅಕ್ಷಯ್ ಅವರಲ್ಲಿ ಯೋಧರ ಬಗ್ಗೆ ಇರುವ ಭಾವನೆಗಳು ಇತರೆ ಜನರೂ ಕೂಡ ಹುತಾತ್ಮ ಯೋಧರ ಕುಟುಂಬಗಳ ನೆರವು ನೀಡಲು ಸ್ಫೂರ್ತಿಯಾಗಲಿದೆ ಎಂದು ಹೇಳಿದ್ದಾರೆ. 
ಇದರಂತೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಕೂಡ ಅಕ್ಷಯ್ ಕುಮಾರ್ ಅವರನ್ನು ಪ್ರಶಂಸಿಸಿದ್ದು, ಸುಕ್ಮಾ ದಾಳಿಯಲ್ಲಿ 12 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. ಹುತಾತ್ಮರಾದ ಪ್ರತೀ ಯೋಧರ ಕುಟುಂಬಗಳಿಗೂ ನಟ ಅಕ್ಷಯ್ ಕುಮಾರ್ ಅವರು ರೂ.9 ಲಕ್ಷ ನೆರವು ನೀಡಿದ್ದಾರೆ. ಯೋಧರ ಬಗ್ಗೆ ಅವರಿಗುವ ಭಾವನೆ ಹಾಗೂ ಸ್ಪಂದನೆಗಳನ್ನು ಪ್ರಶಂಸಿಸಬೇಕೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.