ದೆಹಲಿ ಮಹಾನಗರ ಪಾಲಿಕೆ ಚುನಾವಣೆ: 5 ನಾಯಕರಿಗೆ ಪ್ರಚಾರ ಮೇಲುಸ್ತುವಾರಿ ವಹಿಸಿದ ಅಮಿತ್ ಶಾ
ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಅಧಿಪತ್ಯ ಸ್ಥಾಪಿಸಿದ ನಂತರ ಈಗ ರಾಷ್ಟ್ರ ರಾಜಧಾನಿ ದೆಹಲಿಯ ಮಹಾನಗರ ಪಾಲಿಕೆಗಳ...

Published On :
ನವದೆಹಲಿ: ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಅಧಿಪತ್ಯ ಸ್ಥಾಪಿಸಿದ ನಂತರ ಈಗ ರಾಷ್ಟ್ರ ರಾಜಧಾನಿ ದೆಹಲಿಯ ಮಹಾನಗರ ಪಾಲಿಕೆಗಳ ಚುನಾವಣೆ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಪಕ್ಷದ ಐವರು ನಾಯಕರನ್ನು ಚುನಾವಣಾ ಪ್ರಚಾರ ಮೇಲುಸ್ತುವಾರಿಗಳಾಗಿ ಶನಿವಾರ ನೇಮಕ ಮಾಡಿದ್ದಾರೆ.
ನಿರ್ಮಾಲಾ ಸೀತಾರಾಮನ್, ವಿ.ಸಹಸ್ರಬುದ್ದೆ, ಜಿತೇಂದ್ರ ಸಿಂಗ್, ಸಂಜೀವ್ ಬಲ್ಯಾನ್ ಹಾಗೂ ಶ್ಯಾಮ್ ಜಾಜು ಅವರನ್ನು ದೆಹಲಿ ಮಹಾನಗರ ಪಾಲಿಕೆಗಳ ಚುನಾವಣಾ ಪ್ರಚಾರ ಮೇಲುಸ್ತುವಾರಿಗಳಾಗಿ ನೇಮಕಗೊಂಡಿದ್ದಾರೆ.
ಮುಂದಿನ ತಿಂಗಳಾಂತ್ಯಕ್ಕೆ ದೆಹಲಿಯ ಮೂರು ಮಹಾನಗರ ಪಾಲಿಕೆಗಳ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಶೀಘ್ರದಲ್ಲೇ ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡುವ ಸಾಧ್ಯತೆ ಇದೆ.
2012ರಲ್ಲಿ ದೆಹಲಿ ಮಹಾನಗರ ಪಾಲಿಕೆಯನ್ನು ಉತ್ತರ, ದಕ್ಷಿಣ ಹಾಗೂ ಪೂರ್ವ ದೆಹಲಿ ಮಹಾನಗರ ಪಾಲಿಕೆಗಳಾಗಿ ವಿಭಜನೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Amit Shahಅಮಿತ್ ಶಾDelhi civic pollssupervise poll campaignದೆಹಲಿ ಮಹಾನಗರ ಪಾಲಿಕೆ ಚುನಾವಣೆಪ್ರಚಾರ ಮೇಲುಸ್ತುವಾರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


