ದೇಶ

ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣದ ನಿರ್ವಹಣೆಗೆ ತಗುಲುವ ವೆಚ್ಚ ಎಷ್ಟು ಗೊತ್ತಾ?

ಪ್ರಧಾನಿ ನರೇಂದ್ರ ಮೋದಿ ಅವರ ಸಾಮಾಜಿಕ ಜಾಲತಾಣಗಳನ್ನು ನಿರ್ವಹಣೆಗಾಗಿ ಸರ್ಕಾರದ ಬೊಕ್ಕಸದಿಂದ.....

ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣದ ನಿರ್ವಹಣೆಗೆ ತಗುಲುವ ವೆಚ್ಚ ಎಷ್ಟು ಗೊತ್ತಾ?
ನರೇಂದ್ರ ಮೋದಿ
Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಾಮಾಜಿಕ ಜಾಲತಾಣಗಳನ್ನು ನಿರ್ವಹಣೆಗಾಗಿ ಸರ್ಕಾರದ ಬೊಕ್ಕಸದಿಂದ ಯಾವುದೇ ಖರ್ಚು ಮಾಡಲಾಗುತ್ತಿಲ್ಲ ಎಂದು ಪ್ರಧಾನಿ ಕಾರ್ಯಾಲಯ ಸ್ಪಷ್ಟನೆ ನೀಡಿದೆ. 
ಆಮ್ ಆದ್ಮಿ ಪಕ್ಷದ ಮುಖಂಡ, ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಪ್ರಧಾನಿ ನರೇಂದ್ರ ಮೋದಿ ಅವರ ಸಾಮಾಜಿಕ ಜಾಲತಾಣಗಳ ನಿರ್ವಹಣೆಗಾಗಿ ಸರ್ಕಾರದ ಬೊಕ್ಕಸದಿಂದ ಖರ್ಚಾಗುತ್ತಿರುವ ಹಣವೆಷ್ಟು ಎಂದು ಆರ್ ಟಿಐ ಅರ್ಜಿಯಲ್ಲಿ ಪ್ರಶ್ನಿಸಿದ್ದರು. ಆರ್ ಟಿಐ ಅರ್ಜಿಗೆ ಉತ್ತರಿಸಿರುವ ಪ್ರಧಾನಿ ಕಾರ್ಯಾಲಯ ಸಾಮಾಜಿಕ ಜಾಲತಾಣಗಳ ನಿರ್ವಹಣೆಗಾಗಿ ಸರ್ಕಾರದ ಬೊಕ್ಕಸದಿಂದ ಹಣ ಖರ್ಚಾಗುತ್ತಿಲ್ಲ ಎಂದು ಮಾಹಿತಿ ನೀಡಿದೆ. 
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ಪಿಎಂಒ ಇಂಡಿಯಾ ಆಪ್ ನ್ನು ಮೈ ಗೌರ್ನಮೆಂಟ್ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಸಿದ್ಧಪಡಿಸಿದ್ದು, ಬಹುಮಾನದ ಮೊತ್ತವನ್ನು ಹೊರತುಪಡಿಸಿ ಯಾವುದೇ ಹೆಚ್ಚುವರಿ ಖರ್ಚುಗಳಾಗಿಲ್ಲ ಎಂದು ಪ್ರಧಾನಿ ಕಾರ್ಯಾಲಯ ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.