ದೇಶ

"ಬಹುಮತ-ಸರ್ವಮತ"ದ ಕುರಿತ ಪ್ರಧಾನಿ ಮೋದಿ ಹೇಳಿಕೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮೆಚ್ಚುಗೆ

ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಕುರಿತಂತೆ ಅತ್ತ ಕಾಂಗ್ರೆಸ್ ಕೈ ಕೈ ಹಿಸುಕಿಕೊಳ್ಳುತ್ತಿದ್ದರೆ, ಇತ್ತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

"ಬಹುಮತ-ಸರ್ವಮತ"ದ ಕುರಿತ ಪ್ರಧಾನಿ ಮೋದಿ ಹೇಳಿಕೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮೆಚ್ಚುಗೆ
ಸಂಗ್ರಹ ಚಿತ್ರ
Published On :

ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಕುರಿತಂತೆ ಅತ್ತ ಕಾಂಗ್ರೆಸ್ ಕೈ ಕೈ ಹಿಸುಕಿಕೊಳ್ಳುತ್ತಿದ್ದರೆ, ಇತ್ತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ  ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಸಾಧಿಸಿದ ಬಳಿಕ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಜಯವನ್ನು ಬಹುಮತದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಆದರೆ ರಾಜ್ಯಗಳಲ್ಲಿ  ಆಡಳಿತ ನಡೆಸುವುದು ಸರ್ವಮತದ ಮೇಲೆ. ಭಾರತದ ಸಂಪ್ರದಾಯ ಇದಾಗಿದ್ದು, ಬಹುಪಾಲು ಜನರು ಇದನ್ನೇ ಬಯಸುತ್ತಾರೆ ಎಂದು ಹೇಳಿದ್ದರು.

ಇದೇ ವಿಚಾರವಾಗಿ ಇಂಡಿಯಾ ಟುಡೇ ಪತ್ರಿಕೆಗೆ ಪ್ರತಿಕ್ರಿಯೆ ನೀಡಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಈ ಮಾತುಗಳನ್ನು ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ."ಪ್ರಧಾನಿ ಮೋದಿ  ವಿನಮ್ರತೆಯ ಅಗತ್ಯದ ಬಗ್ಗೆ ಮಾತನಾಡಿದ್ದಾರೆ. ಇದನ್ನು ಕೇಳಿ ನನಗೆ ಸಂತೋಷವಾಯಿತು ಎಂದು ಹೇಳಿದ್ದಾರೆ. ಸಮಾಲೋಚನೆ ಮತ್ತು ಒಮ್ಮತ ಉತ್ತಮ ಆಡಳಿತದ ಮಾರ್ಗವಾಗಿದೆ ಎಂದು ಪ್ರಣಬ್ ಮುಖರ್ಜಿ ಅಭಿಪ್ರಾಯ  ಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.