ಹೆಸರಿಗೆ ಮಾತ್ರ ಸೋನಿಯಾ ಅಧ್ಯಕ್ಷೆ, ಕಾಂಗ್ರೆಸ್ ಪಕ್ಷ ನಡೆಸುತ್ತಿರುವುದು ರಾಹುಲ್: ನಾಯ್ಡು
ಸೋನಿಯಾ ಗಾಂಧಿ ಹೆಸರಿಗೆ ಮಾತ್ರವೇ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ. ಆದರೆ, ಪಕ್ಷ ನಡೆಸುತ್ತಿರುವುದು ಮಾತ್ರ ಉಪಾಧ್ಯಕ್ಷ ರಾಹುಲ್ ಗಾಂಧಿ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು...

Published On :
ಹೈದರಾಬಾದ್: ಸೋನಿಯಾ ಗಾಂಧಿ ಹೆಸರಿಗೆ ಮಾತ್ರವೇ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ. ಆದರೆ, ಪಕ್ಷ ನಡೆಸುತ್ತಿರುವುದು ಮಾತ್ರ ಉಪಾಧ್ಯಕ್ಷ ರಾಹುಲ್ ಗಾಂಧಿ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಶನಿವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ರಾಹುಲ್ ಗಾಂಧಿ ಕಳೆದ ಹತ್ತು ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. ಸೋನಿಯಾ ಅವರು ಕೇವಲ ಹೆಸರಿಗಷ್ಟೇ ಪಕ್ಷದಲ್ಲಿ ರಾಷ್ಟ್ರೀಯ ಅಧ್ಯಕ್ಷೆಯಾಗಿದ್ದಾರೆಂದು ಹೇಳಿದ್ದಾರೆ.
ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಪೈಕಿ ಉತ್ತರಪ್ರದೇಶ ಮತ್ತು ಉತ್ತರಖಾಂಡ್ ನಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಂಡ ಹಿನ್ನಲೆಯಲ್ಲಿ ವೆಂಕಯ್ಯ ನಾಯ್ಡು ಅವರು ಈ ರೀತಿಯಾಗಿ ಹೇಳಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


