ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್: ಭಾರತೀಯ ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿ
ಜಮ್ಮು ಮತ್ತು ಕಾಶ್ಮೀರದ ರಜೌರಿ ಮತ್ತು ಪೂಂಚ್ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆ ಮೇಲೆ ಅಪ್ರಚೋದಿತ ಗುಂಡಿನ...

Published On :
ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಮತ್ತು ಪೂಂಚ್ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸುತ್ತಿದೆ.
ಭಿಂಬರ್ ಘಲಿಯಲ್ಲಿ ಇಂದು ಬೆಳಿಗಿನ ಜಾವ 4 ಗಂಟೆಯಿಂದ 6.45ರವರೆಗೂ ಭಾರತೀಯ ಸೇನೆ ಮೇಲೆ ಪಾಕಿಸ್ತಾನ ಅಪ್ರಚೋದಿತ ಗುಂಡಿನ ಮತ್ತು ಶೆಲ್ ಗಳ ದಾಳಿ ನಡೆಸಿದ್ದು, ದಾಳಿಗೆ ಸೇನಾ ಪಡೆ ದಿಟ್ಟ ಉತ್ತರವನ್ನ ನೀಡಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಷ್ ಮೆಹ್ತಾ ಅವರು ಹೇಳಿದ್ದಾರೆ.
ಇದಲ್ಲದೆ, ಪೂಂಚ್ ಜಿಲ್ಲೆಯ ಬಲಕೋಟ್ ನಲ್ಲಿಯೂ ಪಾಕಿಸ್ತಾನ ಪಡೆ ಭಾರತೀಯ ಸೇನೆ ಮೇಲೆ ಗುಂಡಿನ ದಾಳಿ ನಡೆಸಿದ್ದು, 2 ಇಂಜಿನ ಮಾರ್ಟರ್ಸ್ ಮತ್ತು ಆಟೋಮೆಟಿಕ್ ವೆಪನ್ಸ್ ಗಳ ಮೂಲಕ ದಾಳಿ ನಡೆಸಿದೆ. ದಾಳಿಯಲ್ಲಿ ಯಾವುದೇ ನಷ್ಟ, ಪ್ರಾಣಹಾನಿ ಸಂಭವಿಸಿಲ್ಲ ಎಂದು ಮೆಹ್ತಾ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian ArmyPakistanಪಾಕಿಸ್ತಾನPoonchಪೂಂಚ್ಕದನ ವಿರಾಮ ಉಲ್ಲಂಘನೆಗಡಿ ನಿಯಂತ್ರಣ ರೇಖೆಭಾರತೀಯ ಸೇನೆLoCRajouriceasefire voilationರಜೌರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


