ದೇಶ

ಜೆಎನ್ ಯು ನಲ್ಲಿ ಪ್ರತಿಭಟನೆಯ ಸರಣಿ: ಎಲ್ಲೋ ಏನೋ ಸಮಸ್ಯೆ ಇದೆ ಎಂದ ದೆಹಲಿ ಹೈಕೋರ್ಟ್

ಜವಾಹರ್ ಲಾಲ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಹೆಚ್ಚುತ್ತಿರುವುದು ಅಲ್ಲಿ ಸಮಸ್ಯೆ ಇದೆ ಎನ್ನುವುದನ್ನು ಸೂಚಿಸುತ್ತಿದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ಜೆಎನ್ ಯು ನಲ್ಲಿ ಪ್ರತಿಭಟನೆಯ ಸರಣಿ: ಎಲ್ಲೋ ಏನೋ ಸಮಸ್ಯೆ ಇದೆ ಎಂದ ದೆಹಲಿ ಹೈಕೋರ್ಟ್
ಜೆಎನ್ ಯು ಪ್ರತಿಭಟನೆ
Published On :
ನವದೆಹಲಿ: ಜವಾಹರ್ ಲಾಲ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಹೆಚ್ಚುತ್ತಿರುವುದು ಅಲ್ಲಿ ಸಮಸ್ಯೆ ಇದೆ ಎನ್ನುವುದನ್ನು ಸೂಚಿಸುತ್ತಿದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. 
ಕಳೆದ 9 ತಿಂಗಳಲ್ಲಿ ಜೆಎನ್ ಯುನಲ್ಲಿ 92 ಪ್ರತಿಭಟನೆಗಳು ನಡೆದಿದ್ದು ವಿಶ್ವವಿದ್ಯಾನಿಲಯದ ಕಾರ್ಯನಿರ್ವಹಣೆಗೆ ಅಡ್ಡಿ ಉಂಟಾಗುತ್ತಿದೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ವಿದ್ಯಾರ್ಥಿಗಳಿಗೆ ಪ್ರತಿಭಟನೆ ನಡೆಸಲು ಅನುಮತಿ ನೀಡಿರುವ ದೆಹಲಿ ಹೈಕೋರ್ಟ್ ವಿಶ್ವವಿದ್ಯಾನಿಲಯದ ಕಾರ್ಯನಿರ್ವಹಣೆಗೆ ಅಡ್ಡಿ ಉಂಟಾಗಬಾರದೆಂದು ಎಚ್ಚರಿಕೆ ನೀಡಿದೆ. 
ಆಡಳಿತ ವಿಭಾಗದಿಂದ 100 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಪ್ರತಿಭಟನೆಗೆ ಅವಕಾಶ ನಿರಾಕರಿಸಿದ್ದ ಕೋರ್ಟ್ ಈಗ ಆದೇಶವನ್ನು ಮಾರ್ಪಾಡು ಮಾಡಿದ್ದು, ವಿವಿ ಉದ್ಯಾನದ ಎದುರಿನ ಪ್ರದೇಶದಲ್ಲಿ ಪ್ರತಿಭಟನೆ ಮಾಡಬಹುದೆಂದು ಅನುಮತಿ ನೀಡಿದೆ. ಪ್ರತಿಭಟನೆಗೆ ವಿಧಿಸಿದ್ದ ನಿರ್ಬಂಧವನ್ನು ಮಾರ್ಪಾಡು ಮಾಡಿರುವ ಕೋರ್ಟ್,  ಪ್ರತಿ ತಿಂಗಳೂ ಕನಿಷ್ಠ 10 ಪ್ರತಿಭಟನೆ ಏಕೆ ನಡೆಯುತ್ತದೆ ಎಂಬುದರ ಬಗ್ಗೆ ಜೆಎನ್ ಯು ವಿಶ್ವವಿದ್ಯಾನಿಲಯ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಸಲಹೆ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.