ಯೋಗಿ ಆದಿತ್ಯನಾಥ್'ಗೆ ಉತ್ತರಪ್ರದೇಶ ಮುಖ್ಯಮಂತ್ರಿ ಪಟ್ಟ; ಉಮಾ ಭಾರತಿ ಸಂತಸ
ಉತ್ತರಪ್ರದೇಶ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅವರು ಪ್ರಮಾಣವಚನ ಸ್ವೀಕಾರ ಮಾಡುತ್ತಿರುವುದಕ್ಕೆ ಕೇಂದ್ರ ಸಚಿವೆ ಉಮಾ ಭಾರತಿಯವರು ಭಾನುವಾರ ಸಂತಸ...

Published On :
ನವದೆಹಲಿ: ಉತ್ತರಪ್ರದೇಶ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅವರು ಪ್ರಮಾಣವಚನ ಸ್ವೀಕಾರ ಮಾಡುತ್ತಿರುವುದಕ್ಕೆ ಕೇಂದ್ರ ಸಚಿವೆ ಉಮಾ ಭಾರತಿಯವರು ಭಾನುವಾರ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಯೋಗಿ ಆದಿತ್ಯನಾಥ್ ಅವರು ನನ್ನ ಸಹೋದರನಿದ್ದಂತೆ. ಯೋಗಿಯವರು ಉತ್ತರಪ್ರದೇಶ ಮುಖ್ಯಮಂತ್ರಿಯಾಗುತ್ತಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.
ನನ್ನ ಪ್ರಕಾರ, ನರೇಂದ್ರ ಮೋದಿಯವರು ಭಾರತದ ಪ್ರಧಾನಮಂತ್ರಿಗಳಾಗಿರುವುದಕ್ಕೆ ಹಾಗೂ ನನ್ನ ಸಹೋದರ ಯೋಗಿ ಅವರು ಉತ್ತರಪ್ರದೇಶ ಮುಖ್ಯಮಂತ್ರಿಯಾಗುತ್ತಿರುವುದು 21ನೇ ಶತಮಾನದ ಉತ್ತಮವಾದ ಸುದ್ದಿಯಾಗಿದೆ. ಅಧಿಕಾರ ಸ್ವೀಕಾರ ಮಾಡಿದ ಬಳಿಕ ಯೋಗಿಯವರು ಎಡಪಂಥೀಯರಿಗೆ ಮುಖಕ್ಕೆ ಹೊಡೆದಂತೆ ಏಕಕಾಲದಲ್ಲಿ ರಾಜ್ಯದ ಅಭಿವೃದ್ಧಿ ಹಾಗೂ ರಾಷ್ಟ್ರೀಯತೆಯ ಕಡೆಗೆ ಗಮನ ಹರಿಸಲಿದ್ದಾರೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


