ದೇಶ

ಕಾನೂನು ಸುವ್ಯವಸ್ಥೆಗೆ ಯೋಗಿ ಆದಿತ್ಯನಾಥ್ ಮೊದಲ ಆದ್ಯತೆ, ಶೀಘ್ರ ಖಾತೆ ಹಂಚಿಕೆ

ಅಲಹಬಾದ್ ನಲ್ಲಿ ಬಿಎಸ್ಪಿ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಪ್ರದೇಶ...

ಕಾನೂನು ಸುವ್ಯವಸ್ಥೆಗೆ ಯೋಗಿ ಆದಿತ್ಯನಾಥ್ ಮೊದಲ ಆದ್ಯತೆ, ಶೀಘ್ರ ಖಾತೆ ಹಂಚಿಕೆ
ಯೋಗಿ ಆದಿತ್ಯನಾಥ್
Published On :
ಲಖನೌ: ಅಲಹಬಾದ್ ನಲ್ಲಿ ಬಿಎಸ್ಪಿ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಪ್ರದೇಶ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಧಾರಿಸುವ ಬಗ್ಗೆ ನಿರ್ಲಕ್ಷ ಬೇಡ ಎಂದು ಪೊಲೀಸ್ ಮಹಾ ನಿರ್ದೇಶಕ ಜಾವೀದ್ ಅಹಮ್ಮದ್ ಅವರಿಗೆ ಸೋಮವಾರ ಸೂಚಿಸಿದ್ದಾರೆ.
ಬಿಎಸ್ಪಿ ನಾಯಕನ ಹತ್ಯೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಯೋಗಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮರು ಸ್ಥಾಪನೆ ನಮ್ಮ ಸರ್ಕಾರದ ಮೊದಲ ಆದ್ಯತೆ ಎಂದು ಹೇಳಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.
ನಿನ್ನೆ ರಾತ್ರಿ 60 ವರ್ಷದ ಬಿಎಸ್ಪಿ ನಾಯಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ ಉಪ ಮುಖ್ಯಮಂತ್ರಿಗಳಾದ ಕೇಶವ ಪ್ರದಾಸ್ ಮೌರ್ಯ ಹಾಗೂ ದಿನೇಶ್ ಶರ್ಮಾ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಸಿಎಂ ಭೇಟಿಯ ಬಳಿಕ ಮಾತನಾಡಿದ ಮೌರ್ಯ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸೇರಿದಂತೆ ರೈತರ ಸಾಲ ಮನ್ನಾ ಹಾಗೂ ಬಿಜೆಪಿಯ ಸಂಕಲ್ಪ ಪಾತ್ರದ ಬಗ್ಗೆ ಮೊದಲ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.
ಇಬ್ಬರು ಉಪ ಮುಖ್ಯಮಂತ್ರಿಗಳು ಸೇರಿದಂತೆ ಯೋಗಿ ಆದಿತ್ಯನಾಥ್ ಅವರೊಂದಿಗೆ ಸಚಿವರಾಗಿ ಸಂಪುಟ ಸೇರಿದ 47 ನೂತನ ಸಚಿವರಿಗೆ ಶೀಘ್ರದಲ್ಲೇ ಖಾತೆ ಹಂಚಿಕೆ ಮಾಡುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.