ಅಜ್ಮೀರ್ ಸ್ಫೋಟ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ
ಅಜ್ಮೀರ್ ದರ್ಗಾ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯ ಬುಧವಾರ ಇಬ್ಬರಿಗೆ ಜೀವಾವಧಿ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ...

Published On :
ಜೈಪುರ: ಅಜ್ಮೀರ್ ದರ್ಗಾ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯ ಬುಧವಾರ ಇಬ್ಬರಿಗೆ ಜೀವಾವಧಿ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ.
ರಾಜಸ್ತಾನದ ಅಜ್ಮೀರದಲ್ಲಿರುವ ದರ್ಗಾದಲ್ಲಿ 2007ರಲ್ಲಿ ಬಾಂಬ್ ಸ್ಪೋಟಿಸಲಾಗಿತ್ತು. ಪ್ರಕರಣ ಸಂಬಂಧ ಭವೇಶ್ ಪಟೇಲ್ ಮತ್ತು ದೇವೇಂದ್ರ ಗುಪ್ತಾ ವಿರುದ್ಧ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಇಬ್ಬರಿಗೆ ಎನ್ ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ತೀರ್ಪನ್ನು ಪ್ರಕಟಿಸಿದೆ. ಅಲ್ಲದೆ, ಪಟೇಲ್'ಗೆ ರೂ.10,000 ಮತ್ತು ಗುಪ್ತಾಗೆ ರೂ.5,000 ದಂಡವನ್ನು ವಿಧಿಸಿದೆ.
ಅಜ್ಮೀರ್ ದರ್ಗಾ ಸ್ಫೋಟ ಪ್ರಕರಣ ಕುರಿತಂತೆ ಮಾರ್ಚ್ 8 ರಂದು ಎನ್ ಐಎ ನ್ಯಾಯಾಲಯ ತೀರ್ಪು ನೀಡಿತ್ತು. ಪ್ರಕರಣದಲ್ಲಿ ಭವೇಶ್ ಪಟೇಲ್ ಮತ್ತು ದೇವಂದ್ರ ಗುಪ್ತಾ ಹಾಗೂ ಸುನಿಲ್ ಜೋಷಿ ವಿರುದ್ಧ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿತ್ತು. ಪ್ರಕರಣದಲ್ಲಿ ಆರೋಪಿಗಳಾಗಿದ್ದ ಸ್ವಾಮಿ ಅಸೀಮಾನಂದ ಮತ್ತು ಇತರರನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು. ಸುನಿಲ್ ಜೋಷಿ ಈಗಾಗಲೇ ಸಾವನ್ನಪ್ಪಿರುವ ಹಿನ್ನಲೆಯಲ್ಲಿ ಇಂದು ನ್ಯಾಯಾಲಯ ಉಳಿದ ಇಬ್ಬರು ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.
2007ರ ಅ.11 ರಂದು ಅಜ್ಮೀರದ ಖ್ವಾಜಾ ಮೋಯಿದ್ದಾನ್ ಚಿಸ್ತಿ ದರ್ಗಾದಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಮೂವರು ಸಾವನ್ನಪ್ಪಿ, ಹಲವರಿಗೆ ಗಾಯವಾಗಿತ್ತು. ಪ್ರಕರಣವನ್ನು ರಾಜಸ್ಥಾನ ಎಟಿಎಸ್ ಅಧಿಕಾರಿಗಳು ತನಿಖೆ ನಡೆಸುತ್ತಿತ್ತು. 2011ರ ಏ.6ರಂದು ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡಕ್ಕೆ ಹಸ್ತಾಂತರಿಸಲಾಗಿತ್ತು. ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು ಹೊಸದಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ಪ್ರಕರಣ ಸಂಬಂಧ 149 ಸಾಕ್ಷಿಗಳ ವಿಚಾರಣೆ ನಡೆಸಲಾಗಿದ್ದು, 451 ಕಡತಗಳನ್ನು ಪರಿಶೀಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
special courtಜೀವಾವಧಿ ಶಿಕ್ಷೆNIAವಿಶೇಷ ನ್ಯಾಯಾಲಯLife imprisonmentAjmer Dargah blastಅಜ್ಮೀರ್ ದರ್ಗಾ ಸ್ಫೋಟಎನ್\'ಐಎ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


