ದೇಶ

ಅಯೋಧ್ಯೆ ವಿವಾದ ಶೀಘ್ರದಲ್ಲಿಯೇ ಬಗೆಹರಿಯಲಿದೆ: ಆರ್'ಎಸ್ಎಸ್

ಅಯೋಧ್ಯೆ ರಾಮ ಮಂದಿರ ವಿವಾದ ಶೀಘ್ರದಲ್ಲಿಯೇ ಬಗೆಹರಿಯಲಿದ್ದು, ಪ್ರತೀಯೊಬ್ಬರ ಪಾಲ್ಗೊಳ್ಳುವಿಕೆ ಮೂಲಕವೇ ರಾಮ ಮಂದಿರ ನಿರ್ಮಾಣವಾಗಲಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಮಂಗಳವಾರ...

ಅಯೋಧ್ಯೆ ವಿವಾದ ಶೀಘ್ರದಲ್ಲಿಯೇ ಬಗೆಹರಿಯಲಿದೆ: ಆರ್'ಎಸ್ಎಸ್
ರಾಷ್ಟ್ರೀಯ ಸ್ವಯಂಸೇವಕ ಸಂಘ
Published On :
ಅಯೋಧ್ಯೆ: ಅಯೋಧ್ಯೆ ರಾಮ ಮಂದಿರ ವಿವಾದ ಶೀಘ್ರದಲ್ಲಿಯೇ ಬಗೆಹರಿಯಲಿದ್ದು, ಪ್ರತೀಯೊಬ್ಬರ ಪಾಲ್ಗೊಳ್ಳುವಿಕೆ ಮೂಲಕವೇ ರಾಮ ಮಂದಿರ ನಿರ್ಮಾಣವಾಗಲಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಮಂಗಳವಾರ ಹೇಳಿದೆ, 
ಸುಪ್ರೀಂಕೋರ್ಟ್ ಆದೇಶ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಆರ್'ಎಸ್ಎಸ್ ಜಂಟಿ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹಸಬಲೆ ಅವರು, ಸುಪ್ರೀಂಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇವೆ. ನ್ಯಾಯಾಲದ ಹೊರಾಂಗಣದಲ್ಲಿಯೇ ವಿವಾದ ಇತ್ಯರ್ಥಗೊಳ್ಳಬೇಕೆಂಬುದಕ್ಕೆ ಆರ್'ಎಸ್ಎಸ್ ಈ ಹಿಂದಿನಿಂದಲೂ ಬೆಂಬಲ ವ್ಯಕ್ತಪಡಿಸಿದೆ ಎಂದು ಹೇಳಿದ್ದಾರೆ. 
ಅಯೋಧ್ಯೆ ವಿವಾದ ಸಂಬಂಧ ನ್ಯಾಯಾಲಯದಲ್ಲಿ ಹೂಡಲಾಗಿರುವ ದಾವೆಯಲ್ಲಿ ಆರ್'ಎಸ್ಎಸ್ ಯಾವುದರಲ್ಲೂ ನೇರವಾಗಿ ಭಾಗಿಯಾಗಿಲ್ಲ. ಧರ್ಮ ಸಂಸದ್ ಯಾವುದೇ ನಿರ್ಧಾರಗಳನ್ನು ತೆಗೆದುಕೊಂಡರೂ ಅದನ್ನು ಆರ್'ಎಸ್ಎಸ್ ಬೆಂಬಲಿಸುತ್ತದೆ. ರಾಮ ಜನ್ಮಭೂಮಿ ಹೋರಾಟವನ್ನು ಆರಂಭಿಸಿದ್ದೇ ಧರ್ಮ ಸಂಸದ್ ಆಗಿದ್ದು, ಮಂದಿರ ನಿರ್ಮಾಣ ವಿಚಾರದ ಕುರಿತೂ ಅವರೇ ನಿರ್ಧಾರ ತೆಗೆದುಕೊಳ್ಳಬೇಕಿದೆ. 
ಧರ್ಮ ಸಂಸದ್ ಗೆ ಸೇರಿದ ಜನರೇ ನ್ಯಾಯಾಲಯದ ಅಂಗಳಕ್ಕೆ ಹೋಗಿದ್ದು, ಆರ್'ಎಸ್ಎಸ್ ಈ ಬಗ್ಗೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಧರ್ಮ ಸಂಸದ್ ಯಾವ ನಿರ್ಧಾರವನ್ನು ತೆಗೆದುಕೊಳ್ಳುತ್ತದೆಯೋ ಆ ನಿರ್ಧಾರದ ಮೇಲೆ ಆರ್'ಎಸ್ಎಸ್ ನಿಲ್ಲುತ್ತದೆ. ಶೀಘ್ರದಲ್ಲಿಯೇ ಅಯೋಧ್ಯೆ ವಿವಾದ ಇತ್ಯರ್ಥಗೊಳ್ಳಲಿದ್ದು, ಪ್ರತೀಯೊಬ್ಬ ಭಾರತೀಯನೂ ಪಾಲ್ಗೊಳ್ಳುವ ಮೂಲಕವೇ ರಾಮ ಮಂದಿನ ನಿರ್ಮಾಣಗೊಳ್ಳುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.