ದೇಶ

ಉತ್ತರ ಪ್ರದೇಶ ನೂತನ ಸಚಿವರಿಗೆ ಖಾತೆ ಹಂಚಿಕೆ, ಗೃಹ, ಹಣಕಾಸು ಉಳಿಸಿಕೊಂಡ ಸಿಎಂ ಯೋಗಿ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ತಮ್ಮ ಸಂಪುಟದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದು, ಪ್ರಮುಖ ಖಾತೆಗಳಾದ ಗೃಹ,...

ಉತ್ತರ ಪ್ರದೇಶ ನೂತನ ಸಚಿವರಿಗೆ ಖಾತೆ ಹಂಚಿಕೆ, ಗೃಹ, ಹಣಕಾಸು ಉಳಿಸಿಕೊಂಡ ಸಿಎಂ ಯೋಗಿ
ಯೋಗಿ ಆದಿತ್ಯನಾಥ್
Published On :
ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ತಮ್ಮ ಸಂಪುಟದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದು, ಪ್ರಮುಖ ಖಾತೆಗಳಾದ ಗೃಹ, ಹಣಕಾಸು ಮತ್ತು ನಗರಾಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ.
ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಅವರಿಗೆ ಪಿಡಬ್ಲ್ಯೂಡಿ ಹಾಗೂ ದಿನೇಶ್ ಸಿಂಗ್ ಅವರಿಗೆ ಶಿಕ್ಷಣ ಖಾತೆಯನ್ನು ನೀಡಲಾಗಿದೆ. ಗೃಹ ಖಾತೆಗಾಗಿ ಈ ಇಬ್ಬರು ಉಪ ಮುಖ್ಯಮಂತ್ರಿಗಳು ಪಟ್ಟು ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಗೃಹ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ.
ಯೋಗಿ ಸಂಪುಟದ ಸಚಿವರು ಹಾಗೂ ಖಾತೆಗಳು
ಸುರೇಶ್ ಖನ್ನಾ - ಸಂಸದೀಯ ವ್ಯವಹಾರ
ಸತೀಶ್ ಮೋಹನ್ - ಕೈಗಾರಿಕೆ
ಸ್ವಾಮಿ ಪ್ರಸಾದ್ ಮೌರ್ಯ - ಕಾರ್ಮಿಕ ಮತ್ತು ಉದ್ಯೋಗ
ರಿಟಾ ಬಹುಗುಣ ಜೋಶಿ - ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ, ಪ್ರವಾಸೋದ್ಯಮ
ಶ್ರೀಕಾಂತ್ ಶರ್ಮಾ - ಇಂಧನ
ಸಿದ್ದಾರ್ಥನಾಥ್ ಸಿಂಗ್ - ಆರೋಗ್ಯ
ಸುರೇಶ್ ರಾಣಾ - ಸಕ್ಕರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.