ಯೋಗಿ ಅಧಿಕಾರಕ್ಕೆ ಬಂದ ನಂತರ ಉ.ಪ್ರದೇಶದಲ್ಲಿ ಸುಮಾರು 100 ಪೊಲೀಸರ ಅಮಾನತು
ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂಬ ಕಠಿಣ ಸಂದೇಶ ರವಾನಿಸಲು ಉತ್ತರ ಪ್ರದೇಶದಲ್ಲಿ ಯೋಗಿ...

Published On :
ಲಖನೌ: ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂಬ ಕಠಿಣ ಸಂದೇಶ ರವಾನಿಸಲು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೂರೇ ದಿನದಲ್ಲಿ ಸುಮಾರು 100 ಪೊಲೀಸರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಹಜರತ್ ಗಂಜ್ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿದ ಬೆನ್ನಲ್ಲೇ, ಲಖನೌ, ಘಾಜಿಯಾಬಾದ್, ಮೀರತ್ ಹಾಗೂ ನೋಯ್ಡಾ ಏಳು ಇನ್ಸ್ ಪೆಕ್ಟರ್ ಗಳು ಸೇರಿದಂತೆ ಸುಮಾರು 100 ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಪೊಲೀಸ್ ಮಹಾ ನಿರ್ದೇಶ ಜಾವೀದ್ ಅಹ್ಮದ್ ಅವರು ಪೊಲೀಸ್ ಇಲಾಖೆಯಲ್ಲಿರುವ ಕೆಲವು ಕಪ್ಪು ಕುಳಗಳನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದ್ದಾರೆ.
ಪೊಲೀಸ್ ಮಹಾ ನಿರ್ದೇಶಕರ ಸೂಚನೆಯಂತೆ 100ಕ್ಕೂ ಹೆಚ್ಚು ಪೊಲೀಸರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸ್ ಪಿಆರ್ ಒ ರಾಹುಲ್ ಶ್ರೀವತ್ಸವ್ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


