ಪೊಲೀಸ್ ಠಾಣೆಗೆ ಯೋಗಿ ಆದಿತ್ಯನಾಥ್ ದಿಢೀರ್ ಭೇಟಿ, ಪರಿಶೀಲನೆ
ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯದಲ್ಲಿ ಯೋಗಿ ಆದಿತ್ಯನಾಥ್ ನಿರತರಾಗಿದ್ದು, ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ

Published On :
ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯದಲ್ಲಿ ಯೋಗಿ ಆದಿತ್ಯನಾಥ್ ನಿರತರಾಗಿದ್ದು, ಮಾ.23 ರಂದು ಹಜರತ್ ಗಂಜ್ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗೃಹ ಖಾತೆಯನ್ನೂ ತಮ್ಮಲ್ಲಿಯೇ ಇರಿಸಿಕೊಂಡಿರುವ ಯೋಗಿ ಆದಿತ್ಯನಾಥ್, ಪೊಲೀಸ್ ಠಾಣೆಯಲ್ಲಿನ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮರುಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ. ಪೊಲೀಸ್ ಅಧಿಕಾರಿಗಳ ಕಾರ್ಯಕ್ಷಮತೆ ಹಾಗೂ ಸಿದ್ಧತೆಯನ್ನು ಪರಿಶೀಲನೆ ನಡೆಸಲು ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿರುವುದಾಗಿ ಯೋಗಿ ಆದಿತ್ಯನಾಥ್ ಮಾಹಿತಿ ನೀಡಿದ್ದು, ಕಾನೂನು ಸುವ್ಯಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಗಿರಿಸಲು ಯಾವ ಕ್ರಮಗಳನ್ನು ಕೈಗೊಳ್ಳಬೇಕೆಂಬುದರ ಬಗ್ಗೆ ನಿರ್ಧರಿಸುವುದಾಗಿ ತಿಳಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಜಾರಿಗೊಳಿಸಲು ಅಗತ್ಯವಿರುವ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಹಿಂಜರಿಯುವುದಿಲ್ಲ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಇದೇ ವೇಳೆ ಸೈಬರ್ ಕ್ರೈಂ ಬ್ರಾಂಚ್ ಗೂ ಯೋಗಿ ಆದಿತ್ಯನಾಥ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Uttar pradeshಉತ್ತರ ಪ್ರದೇಶಪೊಲೀಸ್ ಠಾಣೆYogi Adityanathಯೋಗಿ ಆದಿತ್ಯನಾಥ್Surprise VisitHazratganj Police Station
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


