ರಾಜ್ಯಗಳ ಕೃಷಿ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ: ಕೇಂದ್ರ
ರಾಜ್ಯಗಳ ರೈತರ ಕೃಷಿ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಿಲ್ಲ. ಈ ವಿಷಯದಲ್ಲಿ ರಾಜ್ಯ...

Published On :
ನವದೆಹಲಿ: ರಾಜ್ಯಗಳ ರೈತರ ಕೃಷಿ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಿಲ್ಲ. ಈ ವಿಷಯದಲ್ಲಿ ರಾಜ್ಯ ಸರ್ಕಾರಗಳು ತಮ್ಮ ಸಂಪನ್ಮೂಲಗಳನ್ನು ಬಳಸಿಕೊಳ್ಳಬಹುದು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ರೈತರ ಸಾಲ ಮನ್ನಾ ಮಾಡಲು ಯಾವುದೋ ಒಂದು ರಾಜ್ಯವನ್ನು ಆಯ್ದು ಮತ್ತೊಂದು ರಾಜ್ಯವನ್ನು ಬಿಡಲು ಆಗುವುದಿಲ್ಲ. ಸಾಲ ಮನ್ನಾ ಮಾಡುವ ವಿಷಯ ಹಲವು ರಾಜ್ಯಗಳಲ್ಲಿ ಕಗ್ಗಂಟಾಗಿದೆ. ಕೃಷಿ ವಲಯಕ್ಕೆ ಕೇಂದ್ರ ಸರ್ಕಾರದಿಂದ ಹಲವು ನೀತಿ ಮತ್ತು ಸಹಾಯಗಳನ್ನು ನೀಡಲಾಗುತ್ತಿದ್ದು, ಅವುಗಳಡಿಯಲ್ಲಿ ಬಡ್ಡಿದರದಲ್ಲಿ ಸಹಾಯ ಮತ್ತು ಇತರ ನೆರವು ನೀಡಲಾಗುತ್ತದೆ. ಅವುಗಳನ್ನು ಕೇಂದ್ರ ಮುಂದುವರಿಸಿಕೊಂಡು ಹೋಗಲಿದೆ ಎಂದರು.
ರಾಜ್ಯಗಳು ತಮ್ಮದೇ ಆದ ಸಂಪನ್ಮೂಲ ಹೊಂದಿದ್ದರೆ ಮತ್ತು ಆ ನಿಟ್ಟಿನಲ್ಲಿ ಮುಂದುವರಿಯಬೇಕೆಂದರೆ ಅದು ತನ್ನ ಸಂಪನ್ಮೂಲಗಳನ್ನು ಕಂಡುಕೊಳ್ಳಬೇಕು. ಆಗ ಕೇಂದ್ರ ಸರ್ಕಾರ ಒಂದು ರಾಜ್ಯಕ್ಕೆ ಸಹಾಯ ಮಾಡಿ ಇನ್ನೊಂದು ರಾಜ್ಯಕ್ಕೆ ಮಾಡಲಿಲ್ಲ ಎಂಬ ಆರೋಪ ಬರುವುದಿಲ್ಲ ಎಂದು ನಿನ್ನೆ ರಾಜ್ಯಸಭೆಯಲ್ಲಿ ಉತ್ತರಿಸಿದರು.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಸಣ್ಣ ಮತ್ತು ಅತಿ ಸಣ್ಣ ರೈತರ ಸಾಲ ಮನ್ನಾ ಮಾಡಲಿದೆ ಎಂದು ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ತಿಳಿಸಿದರು.
ಯುಪಿಎ ಸರ್ಕಾರ 2006ರಲ್ಲಿ ಮಾಡಿದಂತೆ ಪ್ರಸ್ತುತ ಎನ್ ಡಿಎ ಸರ್ಕಾರ ದೇಶಾದ್ಯಂತ ರೈತರ ಕೃಷಿ ಸಾಲ ಮನ್ನಾ ಮಾಡಬೇಕೆಂದು ಕಾಂಗ್ರೆಸ್ ಒತ್ತಾಯಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


