ಶಾರೂಖ್ ಖಾನ್, ಜೂಹಿ ಚಾವ್ಲಾಗೆ ಇಡಿ ಶೋಕಾಸ್ ನೋಟಿಸ್
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯಡಿ ಜಾರಿ ನಿರ್ದೇಶನಾಲಯ ಬಾಲಿವುಡ್ ನಟ ಶಾರೂಖ್ ಖಾನ್ ಹಾಗೂ ನಟಿ ಜೂಹಿ ಚಾವ್ಲಾ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

Published On :
ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯಡಿ ಜಾರಿ ನಿರ್ದೇಶನಾಲಯ ಬಾಲಿವುಡ್ ನಟ ಶಾರೂಖ್ ಖಾನ್ ಹಾಗೂ ನಟಿ ಜೂಹಿ ಚಾವ್ಲಾ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಬಾಲಿವುಡ್ ನಟ ಶಾರೂಖ್ ಖಾನ್ ಹಾಗೂ ಶಾರೂಖ್ ಖಾನ್ ಅವರ ಪತ್ನಿ ಐಪಿಎಲ್ ಫ್ರಾಂಚೈಸಿಯ ಮಾಲಿಕರಾಗಿರುವ ಗೌರಿ ಖಾನ್ ಅವರಿಗೂ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯನ್ನು ಉಲ್ಲಂಘನೆ ಮಾಡಿರುವುದರಿಂದ ಈ ಮೂವರಿಗೂ ಶೋಕಾಸ್ ನೋಟಿಸ್ ಜಾರಿ ಮಾಡುತ್ತಿರುವುದಾಗಿ ಜಾರಿ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
2008 ರಲ್ಲಿ ರೆಡ್ ಚಿಲ್ಲಿ ಎಂಟರ್ ಪ್ರೈಸಸ್ ಕೋಲ್ಕತ್ತಾ ನೈಟ್ ರೈಡರ್ಸ್ ನ ಹಕ್ಕನ್ನು ಪಡೆಯುವುದಕ್ಕಾಗಿ ಉದ್ದೇಶಕ್ಕಾಗಿ ವಿಶೇಷ ವಾಹನವನ್ನು ತಯಾರಿಸಲಾಗಿತ್ತು. ಐಪಿಎಲ್ ಯಶಸ್ಸಿನ ನಂತರ ಕೆಆರ್ ಎಸ್ ಪಿಎಲ್ 2 ಕೋಟಿಯಷ್ಟು ಹೆಚ್ಚುವರಿ ಷೇರುಗಳನ್ನು ವಿತರಿಸಿತ್ತು. ಇದರಲ್ಲಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯನ್ನು ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


