45,622 ರೂ. ಕೋಟಿ ಅಘೋಷಿತ ಆದಾಯ ಪತ್ತೆ ಮಾಡಿದ ಐಟಿ ಇಲಾಖೆ
ಮೂರು ವರ್ಷಗಳಲ್ಲಿ ಆದಾಯ ತೆರಿಗೆ ಇಲಾಖೆ ಒಟ್ಟು 45,622 ಕೋಟಿ ಅಘೋಷಿತ ಆದಾಯ ಪತ್ತೆ ಮಾಡಿದೆ.

Published On :
ನವದೆಹಲಿ: ಮೂರು ವರ್ಷಗಳಲ್ಲಿ ಆದಾಯ ತೆರಿಗೆ ಇಲಾಖೆ ಒಟ್ಟು 45,622 ಕೋಟಿ ಅಘೋಷಿತ ಆದಾಯ ಪತ್ತೆ ಮಾಡಿದೆ.
ಸುಮಾರು 2,534 ವ್ಯಕ್ತಿಗಳ ತಂಡಗಳ ಆದಾಯದ ಬಗ್ಗೆ ಶೋಧಕಾರ್ಯ ನಡೆಸಿರುವ ಆದಾಯ ತೆರಿಗೆ ಇಲಾಖೆ, ಮುಟ್ಟುಗೋಲು ಹಾಕಿಕೊಂಡಿರುವ ಸುಮಾರು 3,625 ಕೋಟಿ ರೂಪಾಯಿ ಮೌಲ್ಯದ ಆಸ್ತಿ (ನಗದು, ಚಿನ್ನಾಭರಣ ಇತ್ಯಾದಿ)ಯನ್ನು ಹೊರತುಪಡಿಸಿ ಒಟ್ಟು 45,622 ಕೋಟಿ ರೂಪಾಯಿಗಳಷ್ಟು ಅಘೋಷಿತ ಆದಾಯವನ್ನು ಪತ್ತೆ ಮಾಡಿದೆ ಎಂದು ಹಣಕಾಸು ಇಲಾಖೆಯ ರಾಜ್ಯ ಖಾತೆ ಕೇಂದ್ರ ಸಚಿವ ಸಂತೋಷ್ ಕುಮಾರ್ ಗಂಗ್ವರ್ ಲೋಕಸಭೆಗೆ ತಿಳಿಸಿದ್ದಾರೆ.
2017 ರದ್ದೂ ಸೇರಿಸಿ ಕಳೆದ ಮೂರು ವರ್ಷಗಳಲ್ಲಿ ಅಂದಾಜಿಸಲಾಗಿದ್ದ ವ್ಯಕ್ತಿಗಳ ಒಟ್ಟಾರೆ ಆದಾಯದ ಮೇಲೆ ವಿಧಿಸಲಾಗಿರುವ ತೆರಿಗೆಯ ಜೊತೆಗೆ ಐಟಿಡಿ 2,432 ಪ್ರಕರಣಗಳಲ್ಲಿ ಪ್ರಾಸಿಕ್ಯೂಶನ್ ದೂರುಗಳನ್ನು ದಾಖಲಿಸಲಾಗಿದ್ದು, 4,264 ಕಾಂಪೌಂಡಿಂಗ್ ಅಪ್ಲಿಕೇಶನ್ ಗಳನ್ನು ದಾಖಲಿಸಿಕೊಳ್ಳಲಾಗಿದೆ. ಕ್ರಿಮಿನಲ್ ಕೋರ್ಟ್ ಗಳಲ್ಲಿ ಇತ್ಯರ್ಥವಾಗಿರುವ ಪ್ರಕರಣಗಳ ಪೈಕಿ 116 ಜನರನ್ನು ಐಟಿ ಆಕ್ಟ್ ನ ಅಡಿಯಲ್ಲಿ ಅಕ್ರಮ ಎಸಗಿರುವುದು ಸಾಬೀತಾಗಿದ್ದರಿಂದ ಅಪರಾಧಿಗಳೆಂದು ಘೋಷಿಸಲಾಗಿದೆ ಎಂದು ಸಂತೋಷ್ ಕುಮಾರ್ ಗಂಗ್ವರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


