ನಂಜನಗೂಡು ಉಪಚುನಾವಣೆಯಿಂದ ಹಿಂದೆ ಸರಿದ ಜೆಡಿಎಸ್; 'ಕೈ'ಗೆ ಲಾಭ
ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಿಂದ ಜೆಡಿಎಸ್ ಹಿಂದೆ ಸರಿದಿದ್ದು, ಚುನಾವಣೆಯಲ್ಲಿ ಸ್ಥಳೀಯ ಪಕ್ಷಯ ಪಕ್ಷ ಜೆಡಿಎಸ್ ಹಿಂದೆ ಸರಿದಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಲಾಭವಾಗುವ ಎಲ್ಲಾ ಸಾಧ್ಯತೆಗಳು ಕಂಡು ಬರುತ್ತಿದೆ...

Published On :
ಮೈಸೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಿಂದ ಜೆಡಿಎಸ್ ಹಿಂದೆ ಸರಿದಿದ್ದು, ಚುನಾವಣೆಯಲ್ಲಿ ಸ್ಥಳೀಯ ಪಕ್ಷಯ ಪಕ್ಷ ಜೆಡಿಎಸ್ ಹಿಂದೆ ಸರಿದಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಲಾಭವಾಗುವ ಎಲ್ಲಾ ಸಾಧ್ಯತೆಗಳು ಕಂಡು ಬರುತ್ತಿದೆ.
ನಂಜನಗೂಡಿನಲ್ಲಿ 7 ಪುರಸಭೆ ಕೌನ್ಸಿಲರ್ ಗಳನ್ನು ಜೆಡಿಎಸ್ ಹೊಂದಿದ್ದು, ಕೇಶವ್ ಮೂರ್ತಿ ಸೇರಿದಂತೆ ಎಲ್ಲರೂ ಪಕ್ಷವನ್ನು ತೊರೆದು ಕಾಂಗ್ರೆಸ್ ಜೊತೆಗೆ ಕೈಜೋಡಿಸಿದ್ದಾರೆ.
20 ದಶಕಗಳ ಕಾಲ ನಂಜನಗೂಡಿನಲ್ಲಿ ಜೆಡಿಎಸ್ ಗೆ ಕೇಶವ್ ಮೂರ್ತಿಯವರು ಆಧಾರ ಸ್ತಂಭವಾಗಿದ್ದರು. 2013ರ ವಿಧಾನಸಭಾ ಚುನಾವಣೆಯಲ್ಲಿ 41,000 ಮತಗಳನ್ನು ಪಡೆದುಕೊಂಡಿದ್ದರು. 2014ರ ಚುನಾವಣೆಯಲ್ಲಿ ಜೆಡಿಎಸ್ ಕೇವಲ 7,333 ಮತಗಳನ್ನು ಪಡೆಯುವಲ್ಲಿ ಮಾತ್ರ ಸಫಲವಾಗಿತ್ತು. ಕೇಶವ್ ಮೂರ್ತಿಯವರು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿರುವುದರಿಂದ ಜೆಡಿಎಸ್ ಗೆ ದೊಡ್ಡ ಹೊಡೆತವೇ ಬಿದ್ದಂತಾಗಿದೆ. ಹೀಗಾಗಿ ಸಮಯವನ್ನು ವ್ಯರ್ಥ ಮಾಡದೆ ಜೆಡಿಎಸ್ ಉಪ ಚುನಾವಣೆಯಿಂದಲೇ ದೂರ ಉಳಿದು, ಮುಂದಿನ ವಿಧಾನಸಭಾ ಚುನಾವಣೆ 2018ರತ್ತ ಗಮನ ಹರಿಸಲು ನಿರ್ಧರಿಸಿದೆ ಎಂಬ ಮಾತುಗಳು ಕೇಳಿಬರತೊಡಗಿದೆ.
ಜೆಡಿಎಸ್ ಅಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು, ಪಕ್ಷದ ಯಾವುದೇ ನಾಯಕರು ನಂಜನಗೂಡಿನಲ್ಲಿ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.
ಇನ್ನು ಜೆಡಿಎಸ್ ಪಕ್ಷದ ಹಿರಿಯ ನಾಯಕರು ಹೇಳುವ ಪ್ರಕಾರ, ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸುವ ಸಲುವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕೈಜೋಡಿಸಲಿದೆ ಎಂಬ ವಿಶ್ವಾಸದಿಂದ, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗೆ ಹೋಗಲು ಹಲವು ನಾಯಕರು ನಿರ್ಧಾರ ಕೈಗೊಂಡಿದ್ದಾರೆ. ಈ ಬಗ್ಗೆ ಜೆಡಿಎಸ್ ನಾಯಕರು ರಹಸ್ಯವಾಗಿ ತಮ್ಮ ಕೆಲಸಗಳನ್ನು ಮಾಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್ ಮಾಜಿ ನಾಯಕ ಹೆಚ್.ಸಿ. ಮಹದೇವಪ್ಪ ಅವರೊಂದಿಗೂ ನಿಕಟ ಸಂಪರ್ಕವನ್ನು ಹೊಂದಿದ್ದಾರೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


