ಸಿಎಂ ಯೋಗಿ ಆದಿತ್ಯನಾಥ್ ಭೇಟಿ ಮಾಡಿದ ಮುಲಾಯಂ ಪುತ್ರ ಮತ್ತು ಸೊಸೆ
ಉತ್ತರ ಪ್ರದೇಶ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಮಗ ಪ್ರತೀಕ್ ಯಾದವ್ ಮತ್ತವರ ಪತ್ನಿ ಅಪರ್ಣಾ ಯಾದವ್ ಮುಖ್ಯಮಂತ್ರಿ ಯೋಗಿ ...

ಲಕ್ನೋ: ಉತ್ತರ ಪ್ರದೇಶ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಮಗ ಪ್ರತೀಕ್ ಯಾದವ್ ಮತ್ತವರ ಪತ್ನಿ ಅಪರ್ಣಾ ಯಾದವ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ವಿವಿಐಪಿ ಗೆಸ್ಟ್ ಹೌಸ್ ನಲ್ಲಿ ವಾಸವಿರುವ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ ದಂಪತಿ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದರು.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಲಕ್ನೋ ಕಂಟೋನ್‌ಮೆಂಟ್ ವಿಧಾನಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಅಪರ್ಣಾ ಯಾದವ್ ಸ್ಪರ್ಧಿಸಿದ್ದರು. ಬಿಜೆಪಿ ಅಭ್ಯರ್ಥಿ ರೀಟಾ ಬಹುಗುಣ ಎದುರು 33 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು.
ಮುಲಾಯಂ ಸಿಂಗ್ ಅವರ ಮಗನಾಗಿದ್ದರೂ ಪ್ರತೀಕ್ ಯಾದವ್ ಮತ್ತು ಅಪರ್ಣಾ ಯಾದವ್ ಅವರಿಗೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅಭಿಮಾನವಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


