ಸಾಮಾಜಿಕ, ಶೈಕ್ಷಣಿಕ ಹಿಂದುಳಿದ ವರ್ಗಗಳಿಗೆ ಹೊಸ ಆಯೋಗ: ಕೇಂದ್ರ ಸಂಪುಟ ತೀರ್ಮಾನ
ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ವರ್ಗಗಳಿಗೆ ಸಾಂವಿಧಾನಿಕ ಸಂಸ್ಥೆಯಾಗಿರುವ...

Published On :
ನವದೆಹಲಿ: ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ವರ್ಗಗಳಿಗೆ ಸಾಂವಿಧಾನಿಕ ಸಂಸ್ಥೆಯಾಗಿರುವ ರಾಷ್ಟ್ರೀಯ ಆಯೋಗವನ್ನು(ಎನ್ಎಸ್ಇಬಿಸಿ) ಸ್ಥಾಪಿಸಲು ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.
ಹಿಂದುಳಿದ ವರ್ಗಗಳಿಗೆ ಇರುವ ರಾಷ್ಟ್ರೀಯ ಆಯೋಗವನ್ನು ಎನ್ಎಸ್ಇಬಿಸಿ ಬದಲಾಯಿಸಲಿದೆ.
ನಿನ್ನೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ, ಹೊಸ ಆಯೋಗವನ್ನು ಸ್ಥಾಪಿಸಲು ಸಂವಿಧಾನ ತಿದ್ದುಪಡಿಗೆ ಮತ್ತು ಸಂವಿಧಾನ ವಿಧಿ 338ಬಿಯನ್ನು ಸೇರಿಸಲು ಅನುಮೋದನೆ ನೀಡಲಾಯಿತು.
ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನವನ್ನು ಮಸೂದೆ ನೀಡಲಿದೆ. ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲಿದೆ. ಆಯೋಗದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಮೂವರು ಸದಸ್ಯರಿರುತ್ತಾರೆ.
ಹಿಂದುಳಿದ ವರ್ಗಗಳಿಗೆ ಇರುವ ರಾಷ್ಟ್ರೀಯ ಆಯೋಗ ಕಾಯ್ದೆ 1993ನ್ನು ಕೇಂದ್ರ ಸಂಪುಟ ರದ್ದುಗೊಳಿಸಿ ಇದರಡಿ ರಚಿಸಲಾದ ಸಂಸ್ಥೆಯನ್ನು ರದ್ದುಗೊಳಿಸಲು ತೀರ್ಮಾನಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Union Cabinetಕೇಂದ್ರ ಸಂಪುಟNational commission for socially and educationally backward classesNational commission for backward classesಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


