ಕೃಷ್ಣ ಬಿಜೆಪಿ ಸೇರ್ಪಡೆಯಿಂದ ಯಾವುದೇ ಬದಲಾವಣೆ ಆಗುವುದಿಲ್ಲ: ಸಿದ್ದರಾಮಯ್ಯ
ಹಿರಿಯ ರಾಜಕೀಯ ಮುಖಂಡ ಎಸ್.ಎಂ.ಕೃಷ್ಣ ಅವರು ಬಿಜೆಪಿಗೆ ಸೇರಿದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ...
Published On :
ನವದೆಹಲಿ: ಹಿರಿಯ ರಾಜಕೀಯ ಮುಖಂಡ ಎಸ್.ಎಂ.ಕೃಷ್ಣ ಅವರು ಬಿಜೆಪಿಗೆ ಸೇರಿದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದರಿಂದ ಯಾವುದೇ ಬದಲಾವಣೆಯಾಗುವುದಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೂಡ ಬಿಜೆಪಿ ಸೋಲನುಭವಿಸಲಿದೆ ಎಂದು ಹೇಳಿದ್ದಾರೆ.
ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ''ಕೃಷ್ಣ ಅವರು ಬಿಜೆಪಿಗೆ ಸೇರಿದ್ದಾರೆ. ಬಿಜೆಪಿ ಪ್ರಚಾರಕ್ಕೆ ಅವರು ಹೋಗಲಿ. ಹೇಗಿದ್ದರೂ ಮುಂದಿನ ಚುನಾವಣೆಯಲ್ಲಿ ಕೂಡ ಬಿಜೆಪಿ ಸೋಲುತ್ತದೆ'' ಎಂದು ಪ್ರತಿಕ್ರಿಯಿಸಿದರು.
ಬಿಜೆಪಿಗೆ ಮೊನ್ನೆ ಬುಧವಾರ ಸೇರ್ಪಡೆಗೊಂಡ ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮೇಲೆ ವಾಗ್ದಾಳಿ ನಡೆಸಿದರು. ರಾಜಕೀಯ ಎಂದರೆ ಗಂಭೀರ ಕೆಲಸ, ಹಿಟ್ ಅಂಡ್ ರನ್ ಕೆಲಸವಾಗಬಾರದು ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕತ್ವ ಮತ್ತು ಸ್ಥಾನಮಾನ ಮಧ್ಯೆ ಸಂಪರ್ಕವಿಲ್ಲ. ದೇಶದ ಅತ್ಯಂತ ಹಳೆಯ ಪಕ್ಷ ಎನಿಸಿಕೊಂಡಿರುವ ಕಾಂಗ್ರೆಸ್ ನಲ್ಲಿ ಯಾವೊಬ್ಬ ನಾಯಕರೂ ಕೂಡ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಹೊಂದಿಕೆಯಾಗುವುದಿಲ್ಲ ಎಂದು ಹೇಳಿದ್ದಾರೆ.
ಮುಂದಿನ ವರ್ಷ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಎಸ್.ಎಂ.ಕೃಷ್ಣ ಅವರ ಸೇರ್ಪಡೆಯಿಂದ ಬಿಜೆಪಿಗೆ ಬಲ ಬಂದಿದ್ದು ಭವಿಷ್ಯಕ್ಕೆ ಉತ್ತಮವಾಗಲಿದೆ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

