ದೇಶ

ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ; 1 ಸಾವು, ಕಟ್ಟದಲ್ಲಿ ಹಲವರು ಸಿಲುಕಿರುವ ಶಂಕೆ

ದೆಹಲಿಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭೀಕರ ವಿದ್ಯುತ್ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ; 1 ಸಾವು, ಕಟ್ಟದಲ್ಲಿ ಹಲವರು ಸಿಲುಕಿರುವ ಶಂಕೆ
ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
Published On :

ನವದೆಹಲಿ: ದೆಹಲಿಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭೀಕರ ವಿದ್ಯುತ್ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ದೆಹಲಿ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಮುಂಜಾನೆ ಈ ಘಟನೆ ನಡೆದಿದ್ದು, ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ 32 ಅಗ್ನಿಶಾಮಕ ದಳದ  ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದೆ. ಕಟ್ಟಡದಲ್ಲಿ ಹಲವರು ಸಿಲುಕಿರುವ ಶಂಕೆ ಇದ್ದು, 25ಕ್ಕೂ ಅಧಿಕ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗುತ್ತಿದೆಯಾದರೂ, ತನಿಖೆಯ ಬಳಿಕವಷ್ಟೇ ವರದಿ ಬಹಿರಂಗವಾಗಲಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ನರೇಲಾ ಕೈಗಾರಿಕಾ ಪ್ರದೇಶದ ಪೊಲೀಸರು  ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.