ದೇಶ

ಪರೀಕ್ಷಾ ಭೀತಿ: 9 ವರ್ಷದ ಬಾಲಕಿ ಆತ್ಮಹತ್ಯೆಗೆ ಯತ್ನ

ಪರೀಕ್ಷೆಗೆ ಹೆದರಿ 9 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ವಾಯುವ್ಯ ದೆಹಲಿಯ ಭರತ್ ನಗರ ಪ್ರದೇಶದಲ್ಲಿ ನಡೆದಿದೆ...

ಪರೀಕ್ಷಾ ಭೀತಿ: 9 ವರ್ಷದ ಬಾಲಕಿ ಆತ್ಮಹತ್ಯೆಗೆ ಯತ್ನ
ಸಂಗ್ರಹ ಚಿತ್ರ
Published On :
ನವದೆಹಲಿ: ಪರೀಕ್ಷೆಗೆ ಹೆದರಿ 9 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ವಾಯುವ್ಯ ದೆಹಲಿಯ ಭರತ್ ನಗರ ಪ್ರದೇಶದಲ್ಲಿ ನಡೆದಿದೆ. 
ಮಾರ್ಚ್ 21 ರಂದು ಘಟನೆ ನಡೆದಿದೆ. ಸಹೋದರ ಮನೆಯಲ್ಲಿ ಒಬ್ಬನೇ ಇದ್ದ ವೇಳೆ ರೂಮಿಗೆ ಬಂದಿರುವ ಬಾಲಕಿ ಬಟ್ಟೆ ಬದಲಿಸಬೇಕು ಹೊರಗೆ ಹೋಗೆಂದು ತಿಳಿಸಿದ್ದಾಳೆ. ಸಹೋದರ ಹೊರಗೆ ಹೋದ ನಂತರ ಬಾಗಿಲು ಹಾಕಿರುವ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. 
ಗಂಟೆ ಕಳೆದರೂ ಬಾಲಕಿ ಹೊರಗೆ ಬಾರದಿರುವುದನ್ನು ಗಮನಿಸಿದ ಸಹೋದರು ಬಾಗಿಲು ತೆಗೆಯುವಂತೆ ಹೇಳಿದ್ದಾನೆ. ಈ ವೇಳೆ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನಲೆಯಲ್ಲಿ ಹೆದರಿದ ಆತ ಮನೆಯವರನ್ನು ಕೂಗಿದ್ದಾನೆ. ನಂತರ ನೆರೆಮನೆಯವರು ಹಾಗೂ ಕುಟುಂಬಸ್ಥರು ಸೇರಿ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಪರೀಕ್ಷಾ ಭಯದಿಂದಾಗಿ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆಂದು ವರದಿಗಳು ತಿಳಿಸಿವೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.