ದೇಶ

ಅರವಿಂದ್ ಕೇಜ್ರಿವಾಲ್ ರಿಂದ ಮನೆ ತೆರಿಗೆ ರದ್ದತಿ ಭರವಸೆ

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಮನೆ ತೆರಿಗೆ ರದ್ದುಗೊಳಿಸುವುದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ರಿಂದ ಮನೆ ತೆರಿಗೆ ರದ್ದತಿ ಭರವಸೆ
Published On :
ನವದೆಹಲಿ: ದೆಹಲಿಯ ಸ್ಥಳೀಯ ಸಂಸ್ಥೆ ಚುನಾವಣೆಗೆ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಸಿದ್ಧತೆ ನಡೆಸಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಮನೆ ತೆರಿಗೆ ರದ್ದುಗೊಳಿಸುವುದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ. 
ಅಧಿಕಾರಕ್ಕೆ ಬಂದರೆ ಎಲ್ಲಾ ಏರಿಯಾಗಳ ಮನೆ ತೆರಿಗೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ. ಎಲ್ಲಾ ರೀತಿಯ ಯೋಚನೆ ಮಾಡಿಯೇ ಈ ಭರವಸೆ ನೀಡುತ್ತಿರುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ವಿದ್ಯುತ್ ದರ ಇಳಿಕೆ ಮಾಡುವುದು ಸೇರಿದಂತೆ ಈ ಹಿಂದೆ ನೀಡಿದ್ದ ಬಹುತೇಕ ಭರವಸೆಗಳನ್ನು ಆಮ್ ಆದ್ಮಿ ಸರ್ಕಾರ ಈಡೇರಿಸಿದೆ. ಹಾಗೆಯೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಪ್ ಗೆದ್ದರೆ ಮನೆ ತೆರಿಗೆ ರದ್ದುಗೊಳಿಸುವ ಭರವಸೆಯನ್ನೂ ಈಡೇರಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ. 
ದೆಹಲಿಯ 272 ವಾರ್ಡ್ ಗಳಿಗೆ ಏ.23 ರಂದು ಚುನಾವಣೆ ನಡೆಯಲಿದ್ದು ಏ.26 ರಂದು ಫಲಿತಾಂಶ ಪ್ರಕಟವಾಗಲಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.