ದೇಶ

ಮಣಿಪುರದಲ್ಲಿ ಕಂದಕಕ್ಕೆ ಉರುಳಿದ ಬಸ್, 10 ಸಾವು

ಮಣಿಪುರದ ಸೆನಾಪತಿ ಜಿಲ್ಲೆಯಲ್ಲಿ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ...

ಮಣಿಪುರದಲ್ಲಿ ಕಂದಕಕ್ಕೆ ಉರುಳಿದ ಬಸ್, 10 ಸಾವು
ಕಂದಕಕ್ಕೆ ಉರುಳಿದ ಬಸ್(ಸಂಗ್ರಹ ಚಿತ್ರ)
Published On :
ಇಂಪಾಲ: ಮಣಿಪುರದ ಸೆನಾಪತಿ ಜಿಲ್ಲೆಯಲ್ಲಿ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 
ಮಕಾನ್ ಮತ್ತು ಚಕುಮೈ ಬಳಿಯ ಇಂಪಾಲ-ಧಿಮಾಪುರ್ ರಾಷ್ಟ್ರೀಯ ಹೆದ್ದಾರಿ 39ರಲ್ಲಿ ಬೆಳ್ಳಂ ಬೆಳಗ್ಗೆ 3.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು 25 ಮಂದಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಬಸ್ ಇಂಪಾಲದ ಕಡೆ ಬರುತ್ತಿದ್ದಾಗ ದುರಂತ ಸಂಭವಿಸಿದೆ. ದುರಂತಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.