ದೇಶ

ಆಧಾರ್ ಇರುವುದು ಇತರರ ಚಟುವಟಿಕೆಗಳ ಗೂಢಾಚಾರಿಕೆಗಾಗಿ ಅಲ್ಲ: ರಾಜ್ಯಸಭೆಯಲ್ಲಿ ಕಪಿಲ್ ಸಿಬಲ್

ಕಲ್ಯಾಣ ಯೋಜನೆಗಳು ಸೇರಿದಂತೆ ಪಾನ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ಗೂ ಆಧಾರ ಕಡ್ಡಾಯ ಮಾಡಲು ಹೊರಟಿರುವ ಕೇಂದ್ರ....

ಆಧಾರ್ ಇರುವುದು ಇತರರ ಚಟುವಟಿಕೆಗಳ ಗೂಢಾಚಾರಿಕೆಗಾಗಿ ಅಲ್ಲ: ರಾಜ್ಯಸಭೆಯಲ್ಲಿ ಕಪಿಲ್ ಸಿಬಲ್
ಕಪಿಲ್ ಸಿಬಲ್
Published On :
ನವದೆಹಲಿ: ಕಲ್ಯಾಣ ಯೋಜನೆಗಳು ಸೇರಿದಂತೆ ಪಾನ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ಗೂ ಆಧಾರ ಕಡ್ಡಾಯ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಿದ್ದು, ಆಧಾರ್ ಗೆ ಸಂಬಂಧಿಸಿದಂತೆ ಸರ್ಕಾರ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದು ಈ ಬಗ್ಗೆ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಸ್ಪಷ್ಟನೆ ನೀಡುಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಇಂದು ರಾಜ್ಯಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರು, ಆಧಾರ್ ನಿಂದಾಗಿ ಜನ ಭಾರಿ ದೊಡ್ಡ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಆಧಾರ್ ಮಾಹಿತಿ ಹ್ಯಾಕ್ ಮಾಡಿ ಬ್ಯಾಂಕ್ ವ್ಯವಹಾರಕ್ಕೆ ಬಳಸಿಕೊಳ್ಳಬಹುದು. ಅಲ್ಲದೆ ಬ್ಯಾಂಕಿಂಗ್ ವ್ಯವಹಾರವನ್ನೆ ಹ್ಯಾಕ್ ಮಾಡಬಹುದು ಎಂದರು. ಅಲ್ಲದೆ ಪೆಂಟಾಗಾನ್ ಅನ್ನೆ ಹ್ಯಾಕ್ ಮಾಡಿದ ಮೇಲೆ ಆಧಾರ್ ಹ್ಯಾಕ್ ಮಾಡುವುದಿಲ್ಲವೇ? ಎಂದು ಪ್ರಶ್ನಿಸಿದರು.
ಯುಪಿಎ ಸರ್ಕಾರ ಆಧಾರ್ ಜಾರಿಗೆ ತಂದಿದ್ದು ಸರ್ಕಾರದ ಯೋಜನೆಗಳು ಮತ್ತು ಸಬ್ಸಿಡಿ ಜನರಿಗೆ ನೇರವಾಗಿ ತಲುಪಲಿ ಎಂಬ ಉದ್ದೇಶದಿಂದ. ಆದರೆ ಇತರರ ಚಟುವಟಿಕೆಗಳ ಬಗ್ಗೆ ಗೂಢಾಚಾರಿಕೆ ಮಾಡಲು ಅಲ್ಲ. ನಾವು ಪೊಲೀಸ್ ರಾಜ್ಯದಲ್ಲಿ ಬದುಕುತ್ತಿದ್ದೇವೆ ಎಂದು ಕಪಿಲ್ ಸಿಬಲ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಇದೇ ವೇಳೆ ಈ ಹಿಂದೆ ಆಧಾರ್ ಯೋಜನೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದನ್ನು ನೆನಪಿಸಿಕೊಂಡ ಕಾಂಗ್ರೆಸ್ ನಾಯಕ, ನಿಮ್ಮ ಒಬ್ಬ ನಾಯಕರು ಇತಿಹಾಸದಲ್ಲೇ ಆಧಾರ್ ಒಂದು ದೊಡ್ಡ ಮೋಸ ಎಂದು ದೂರಿದ್ದರು. ಈಗ ಆ ಮೋಸವನ್ನು ನಮ್ಮ ಮೇಲೆ ಏಕೆ ಬಲವಂತವಾಗಿ ಹೇರುತ್ತಿದ್ದೀರಿ ಸರ್? ಎಂದು ಪ್ರಶ್ನಿಸಿದರು.
ಇಂದು ಬೆಳಗ್ಗಯಷ್ಚೇ ಸುಪ್ರೀಂ ಕೋರ್ಟ್ ಸರ್ಕಾರ ಎಲ್ಲಾ ಕಲ್ಯಾಣ ಯೋಜನಿಗಳಿಗೂ ಆಧಾರ್ ಕಡ್ಡಾಯ ಮಾಡುವಂತಿಲ್ಲ ಹಾಗೂ ತೆರಿಗೆ ರಿಟರ್ನ್ ಹಾಗೂ ಇತರೆ ಚಟುವಟಿಕೆಗಳಿಗೂ ಆಧಾರ್ ಬಳಸುವಂತಿಲ್ಲ ಎಂದು ಹೇಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.