ದೇಶ

ಬಾಂಗ್ಲಾದೇಶದಲ್ಲಿ ಅವಳಿ ಬಾಂಬ್ ಸ್ಫೋಟ: ಗಡಿಯಲ್ಲಿ ಬಿಎಸ್ಎಫ್ ಹೈ ಅಲರ್ಟ್

ಬಾಂಗ್ಲಾದೇಶದಲ್ಲಿ ಅವಳಿ ಬಾಂಬ್ ಸ್ಫೋಟಿಸಲಾಗಿದ್ದು, ಈ ಹಿನ್ನಲೆಯಲ್ಲಿ ಬಾಂಗ್ಲಾದೇಶ ಹಾಗೂ ಭಾರತದ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ...

ಬಾಂಗ್ಲಾದೇಶದಲ್ಲಿ ಅವಳಿ ಬಾಂಬ್ ಸ್ಫೋಟ: ಗಡಿಯಲ್ಲಿ ಬಿಎಸ್ಎಫ್ ಹೈ ಅಲರ್ಟ್
ಸಂಗ್ರಹ ಚಿತ್ರ
Published On :
ಶಿಲೋಂಗ್: ಬಾಂಗ್ಲಾದೇಶದಲ್ಲಿ ಅವಳಿ ಬಾಂಬ್ ಸ್ಫೋಟಿಸಲಾಗಿದ್ದು, ಈ ಹಿನ್ನಲೆಯಲ್ಲಿ ಬಾಂಗ್ಲಾದೇಶ ಹಾಗೂ ಭಾರತದ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಬಾಂಗ್ಲಾದೇಶದಲ್ಲಿ ಸರಣಿ ಬಾಂಬ್ ಸ್ಫೋಟಿಸಲಾಗಿದ್ದು, ಉಗ್ರರು ಭಾರತದೊಳಗೆ ನುಸುಳುವ ಶಂಕೆಗಳು ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಭಾರತ ಮತ್ತು ಬಾಂಗ್ಲಾದೇಶ ಗಡಿ ಭಾಗದಲ್ಲಿ ಗಡಿ ಭದ್ರತಾ ಪಡೆಗೆ ಹೈ ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ ಎಂದು ಬಿಎಸ್ಎಫ್ ಇನ್ಸ್'ಪೆಕ್ಟರ್ ಜನರಲ್ ಪಿ.ಕೆ. ದುಬೆ ಅವರು ಹೇಳಿದ್ದಾರೆ. 
ಗುಪ್ತಚರ ಇಲಾಖೆ ನೀಡಿರುವ ಮಾಹಿತಿಯನ್ನು ಮೇಘಾಲಯ ಪೊಲೀಸರಿಗೆ ತಿಳಿಸಲಾಗಿದೆ. ಸಂಭಾವ್ಯ ಉಗ್ರರ ದಾಳಿ ಕುರಿತಂತೆ ಅವಕಾಶಗಳನ್ನು ತೆಗೆದುಕೊಳ್ಳಲು ನಮಗಿಷ್ಟವಿಲ್ಲ. ಈಗಾಗಲೇ ಗಡಿ ಭಾಗದಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.