ದೇಶ

ಲೋಕಸಭೆ: ಜಿಎಸ್ ಟಿ ಗೆ ಸಂಬಂಧಿಸಿದ 4 ಮಸೂದೆಗಳ ಮಂಡನೆ

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಾ.27 ರಂದು ಲೋಕಸಭೆಯಲ್ಲಿ ಜಿಎಸ್ ಟಿಗೆ ಸಂಬಂಧಿಸಿದ 4 ಮಸೂದೆಗಳನ್ನು ಮಂಡಿಸಿದ್ದಾರೆ.

ಲೋಕಸಭೆ: ಜಿಎಸ್ ಟಿ ಗೆ ಸಂಬಂಧಿಸಿದ 4 ಮಸೂದೆಗಳ ಮಂಡನೆ
ಅರುಣ್ ಜೇಟ್ಲಿ
Published On :
ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಾ.27 ರಂದು ಲೋಕಸಭೆಯಲ್ಲಿ ಜಿಎಸ್ ಟಿಗೆ ಸಂಬಂಧಿಸಿದ 4 ಮಸೂದೆಗಳನ್ನು ಮಂಡಿಸಿದ್ದಾರೆ. 
ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತ ಬಳಿಕ ಕೇಂದ್ರ ಸರಕು ಮತ್ತು ಸೇವಾ ತೆರಿಗೆ ಮಸೂದೆ (ಸಿ.ಜಿ.ಎಸ್.ಟಿ) ಮಸೂದೆ 2017, ಏಕೀಕೃತ ಸರಕು ಮತ್ತು ಸೇವಾ ತೆರಿಗೆ ಮಸೂದೆ-2017, ಕೇಂದ್ರಾಡಳಿತ ಪ್ರದೇಶ ಸರಕು ಮತ್ತು ಸೇವಾ ತೆರಿಗೆ ಮಸೂದೆ-2017, ಜಿಎಸ್ ಟಿ ಮಸೂದೆ (ರಾಜ್ಯಗಳಿಗೆ ಪರಿಹಾರ ನೀಡುವ ಮಸೂದೆ)-2017 ಗಳನ್ನು ಲೋಕಸಭೆಯಲ್ಲಿ ಮಂಡಿಸಲಾಗಿದ್ದು, ಜಿಎಸ್ ಟಿ ಜಾರಿಯ (ಜುಲೈ.1 ರಿಂದ) ಒಳಗಾಗಿ ಈ ಮಸೂದೆಗಳನ್ನು ರಾಜ್ಯದ ವಿಧಾನಸಭೆಗಳಲ್ಲೂ ಮಂಡಿಸಿ ಅಂಗೀಕಾರ ಪಡೆದುಕೊಳ್ಳಲಾಗುತ್ತದೆ. 
ಜಿಎಸ್ ಟಿ ಜಾರಿಯಿಂದ ಆರ್ಥಿಕ ಬೆಳವಣಿಗೆ ಶೇ.0.5 ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.