ದೇಶ

ರಾಷ್ಟ್ರಪತಿ ಸ್ಥಾನಕ್ಕೆ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೂಕ್ತ ವ್ಯಕ್ತಿ: ಶಿವಸೇನಾ ಸಂಸದ

ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಆಡಳಿತಾವಧಿ ಮುಂದಿನ ಜುಲೈ ತಿಂಗಳಲ್ಲಿ ಅಂತ್ಯಗೊಳ್ಳಲಿದ್ದು, ಮುಂದಿನ ರಾಷ್ಟ್ರಪತಿ ಯಾರಾಗಲಿದ್ದಾರೆ....

ರಾಷ್ಟ್ರಪತಿ ಸ್ಥಾನಕ್ಕೆ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೂಕ್ತ ವ್ಯಕ್ತಿ: ಶಿವಸೇನಾ ಸಂಸದ
ಮೋಹನ್ ಭಾಗವತ್
Published On :
ಮುಂಬೈ: ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಆಡಳಿತಾವಧಿ ಮುಂದಿನ ಜುಲೈ ತಿಂಗಳಲ್ಲಿ ಅಂತ್ಯಗೊಳ್ಳಲಿದ್ದು, ಮುಂದಿನ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬುದರ ಬಗ್ಗೆ ತೀವ್ರ ಚರ್ಚೆ ಆರಂಭವಾಗಿದೆ. ಇತ್ತೀಚಿಗಷ್ಟೆ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರ ಹೆಸರು ಕೇಳಿಬಂದಿತ್ತು. ಈಗ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರು ರಾಷ್ಟ್ರಪತಿ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂದು ಶಿವಸೇನೆ ಸಂಸದ ಸಂಜಯ್ ರೌತ್ ಅವರು ಸೋಮವಾರ ಹೇಳಿದ್ದಾರೆ.
ಭಾರತವನ್ನು 'ಹಿಂದೂ ರಾಷ್ಟ್ರ'ವನ್ನಾಗಿ ಮಾಡಲು ರಾಷ್ಟ್ರಪತಿ ಸ್ಥಾನಕ್ಕೆ ಮೋಹನ್ ಭಾಗವತ್ ಅವರನ್ನು ಆಯ್ಕೆ ಮಾಡುವುದು ಉತ್ತಮ ಮತ್ತು ದೇಶದ ಅತ್ಯುನ್ನತ ಹುದ್ದೆಯಲ್ಲಿರುವವರು ಕಳಂಕ ರಹಿತರಾಗಿರಬೇಕು. ಹೀಗಾಗಿ ಮೋಹನ್ ಭಾಗವತ್ ಆ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಮತ್ತು ಈ ಬಗ್ಗೆ ಚರ್ಚೆ ನಡೆಯುತ್ತಿರುವುದಾಗಿ ನಾವು ಕೇಳಿದ್ದೇವೆ ಎಂದು ರೌತ್ ವರದಿಗಾರರಿಗೆ ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ಉದ್ಧವ್ ಠಾಕ್ರೆ ಅವರ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ.
ಇದೇ ವೇಳೆ, ರಾಷ್ಟ್ರಪತಿ ಚುನಾವಣೆ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿರುವ ಔತಣಕೂಟದಲ್ಲಿ ಭಾಗವಹಿಸುತ್ತೀರಾ? ಎಂಬ ಪ್ರಶ್ನೆಗೆ ನೇರವಾಗಿ ಉತ್ತರಿಸಿದ ಸೇನಾ ಸಂಸದ, ಮಾತೋಶ್ರೀ(ಉದ್ಧವ್ ಠಾಕ್ರೆ ನಿವಾಸ)ಯಲ್ಲೇ ರುಚಿಕರವಾದ ಆಹಾರ ಸಿದ್ಧವಾಗುತ್ತದೆ. ಕಳೆದ ಎರಡು ರಾಷ್ಟ್ರಪತಿಗಳ ಚುನಾವಣೆಯಲ್ಲಿ ಬಾಳಸಾಹೇಬ್ ಠಾಕ್ರೆ ಹರಿವಿನ ವಿರುದ್ಧವಾಗಿ ಮತ್ತು ದೇಶದ ಹಿತಾಸಕ್ತಿಗೆ ಅನುಗುಣವಾಗಿ ನಡೆದುಕೊಂಡಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.