ಕಾಶ್ಮೀರದಲ್ಲಿ ಉಗ್ರರ ದಾಳಿ: ಕಾರ್ಯಾಚರಣೆಗಿಳಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್'ನಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಸದೆಬಡಿಯಲು ಭಾರತೀಯ ಸೇನಾ ಪಡೆ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಮಂಗಳವಾರ ತಿಳಿದುಬಂದಿದೆ...

Published On :
ಬುದ್ಗಾಮ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್'ನಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಸದೆಬಡಿಯಲು ಭಾರತೀಯ ಸೇನಾ ಪಡೆ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಬುಗ್ದಾಮ್'ನ ಚದೂರಾ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದು, ಸೇನಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ. ಕಾರ್ಯಾಚರಣೆ ವೇಳೆ ಸಾವು-ನೋವುಗಳು ಸಂಭವಿಸಿರುವುದಾಗಿ ತಿಳಿದುಬಂದಿಲ್ಲ.
ನಿನ್ನೆಯಷ್ಟೇ ಕಾಶ್ಮೀರದ ಶೋಪಿಯನ್ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬ ಮನೆಗೆ ನುಗ್ಗಿದ್ದ ಉಗ್ರರು ಬೆದರಿಸಿ ಗನ್ ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಪರಾರಿಯಾಗುವ ವೇಳೆ ಉಗ್ರರು ಗಾಳಿಯಲ್ಲಿ ಗುಂಡು ಹಾರಿಸಿಕೊಂಡು ಓಡಿಹೋಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಉಗ್ರರುBudgamಜಮ್ಮು ಮತ್ತು ಕಾಶ್ಮೀರJammu and Kashmirencounterterroristಭಾರತೀಯ ಸೇನೆಎನ್ ಕೌಂಟರ್ಬುದ್ಗಾಮ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


