ಕಾಶ್ಮೀರ: ಪೊಲೀಸ್ ಅಧಿಕಾರಿಯ ಮನೆಗೆ ನುಗ್ಗಿ ಬೆದರಿಕೆ ಹಾಕಿದ ಉಗ್ರರು!
ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ ನಡೆದಿದ್ದು, ಉಗ್ರರು ಪೊಲೀಸ್ ಅಧಿಕಾರಿಯ ಮನೆಗೆ ನುಗ್ಗಿ ದರೋಡೆ ಮಾಡಿ ಬೆದರಿಕೆ ಹಾಕಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ಒಂದು ವಾರದಲ್ಲಿ ನಡೆದಿರುವ ಎರಡನೆ ಘಟನೆ ಇದಾಗಿದ್ದು,

Published On :
ಶ್ರೀನಗರ: ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ ನಡೆದಿದ್ದು, ಉಗ್ರರು ಪೊಲೀಸ್ ಅಧಿಕಾರಿಯ ಮನೆಗೆ ನುಗ್ಗಿ ದರೋಡೆ ಮಾಡಿ ಬೆದರಿಕೆ ಹಾಕಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ಒಂದು ವಾರದಲ್ಲಿ ನಡೆದಿರುವ ಎರಡನೆ ಘಟನೆ ಇದಾಗಿದ್ದು,
ಪೊಲೀಸ್ ಅಧಿಕಾರಿಗಳ ಮಾಹಿತಿ ಪ್ರಕಾರ ನಾಲ್ವರು ಉಗ್ರರು ಮಾ.28 ರಂದು ರಾತ್ರಿ ಪೊಲೀಸ್ ಅಧಿಕಾರಿಯ ಮನೆಗೆ ನುಗ್ಗಿ ದಾಳಿ ನಡೆಸಿದ್ದು, ಬೆದರಿಕೆ ಹಾಕಿದ್ದಾರೆ. ಇದಕ್ಕೂ ಮುನ್ನ ಸಬ್-ಇನ್ಸ್ ಪೆಕ್ಟರ್ ಮನೆಗೆ ತೆರಳಿ ದಾಳಿ ನಡೆಸಿದ್ದ ಉಗ್ರರು ದರೋಡೆ ಮಾಡಿ ಬೆದರಿಕೆ ಹಾಕಿದ್ದರು. ಇದಕ್ಕೂ ಮುನ್ನ ಜಮ್ಮು-ಕಾಶ್ಮೀರ ಬಂಧಿಖಾನೆ ವಿಭಾಗದ ಅಧಿಕಾರಿ ಮನೆಗೆ ನುಗ್ಗಿ ದಾಳಿ ನಡೆಸಿ ಕಾರಿಗೆ ಬೆಂಕಿ ಹಚ್ಚಿದ್ದರು.
ಈ ಎಲ್ಲಾ ಪ್ರಕರಣಗಳಲ್ಲೂ ಪೊಲೀಸ್ ಅಧಿಕಾರಿಗಳು ಮನೆಯಲ್ಲಿ ಇರದೇ ಇರುವ ಸಮಯದಲ್ಲಿ ಉಗ್ರರು ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


