ಪ್ರಧಾನಿ ಮೋದಿ ವಿರುದ್ಧ ಅವಹೇಳನ ಹೇಳಿಕೆ ನೀಡಿದ್ದಕ್ಕೆ ಥಳಿಸಿದೆ: ರವೀಂದ್ರ ಗಾಯಕ್ವಾಡ್
ಏರ್ ಇಂಡಿಯಾ ಸಿಬ್ಬಂದಿಯನ್ನು ಚಪ್ಪಲಿಯಿಂದ ಥಳಿಸಿ ಭಾರಿ ವಿವಾದಕ್ಕೆ ಕಾರಣವಾಗಿರುವ ಶಿವಸೇನಾ ಸಂಸದ ರವೀಂದ್ರ ಗಾಯಕ್ವಾಡ್ ಅವರು, ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿಯಾಗಿ ಟೀಕಿಸಿದ್ದಕ್ಕೇ...

ನವದೆಹಲಿ: ಏರ್ ಇಂಡಿಯಾ ಸಿಬ್ಬಂದಿಯನ್ನು ಚಪ್ಪಲಿಯಿಂದ ಥಳಿಸಿ ಭಾರಿ ವಿವಾದಕ್ಕೆ ಕಾರಣವಾಗಿರುವ ಶಿವಸೇನಾ ಸಂಸದ ರವೀಂದ್ರ ಗಾಯಕ್ವಾಡ್ ಅವರು, ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿಯಾಗಿ ಟೀಕಿಸಿದ್ದಕ್ಕೇ ಸಿಬ್ಬಂದಿಯನ್ನು ಥಳಿಸಿದೆ ಎಂದು ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಶಿವಸೇನೆ ವಿಡಿಯೋವೊಂದನ್ನು ಬಿಡುಗಡೆ ಮಾಡಿ ಮೊದಲು ಕೈ ಎತ್ತಿದ್ದು ಸಿಬ್ಬಂದಿ ಆ ಬಳಿಕವಷ್ಟೇ ಸಂಸದ ರವೀಂದ್ರ ಗಾಯಕ್ವಾಡ್ ಅವರು ಹಲ್ಲೆ ನಡೆಸಿದ್ದು ಎಂದು ಹೇಳಿಕೊಂಡಿತ್ತು. ಇದರ ಬೆನ್ನಲ್ಲೇ ಸಂಸದ ರವೀಂದ್ರ ಗಾಯಕ್ವಾಡ್ ಅವರು, ಸುಮಾರು 4 ಪುಟಗಳ ಸ್ಪಷ್ಟನೆ ನೀಡಿದ್ದಾರೆ. ಇದರಲ್ಲಿ ಪ್ರತೀ ಘಟನೆಯ ಹಿಂದೆಯೂ ಒಂದು ಪ್ರಚೋದನಾತ್ಮಕ ಕ್ರಿಯೆಗಳಿರುತ್ತವೆ ಎಂದು ಗಾಯಕ್ವಾಡ್ ಹೇಳಿದ್ದಾರೆ. ಅಂತೆಯೇ ಏರ್ ಇಂಡಿಯಾ ಸಿಬ್ಬಂದಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನಕಾರಿಯಾಗಿ ಟೀಕಿಸಿದ್ದರಿಂದಲೇ ತಾವು ಆಕ್ರೋಶಗೊಂಡು ಹಲ್ಲೆ ಮಾಡಬೇಕಾಯಿತು ಎಂದು ಹೇಳಿಕೊಂಡಿದ್ದಾರೆ.
ಅಲ್ಲದೆ ತಾವು ದೆಹಲಿಗೆ ಪ್ರಯಾಣ ಮಾಡಲು ಬಿಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿದ್ದು, ವಿಮಾನದಲ್ಲಿ ಬಿಸಿನೆಸ್ ಕ್ಲಾಸ್ ಸೀಟ್ ಇಲ್ಲ ಎಂದಾದಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಿಕೊಂಡಿದ್ದೇಕೆ. ಕನಿಷ್ಠ ಪಕ್ಷ ಯಾವುದೇ ವಿಮಾನಯಾನ ಅಧಿಕಾರಿಗಳೂ ಈ ಬಗ್ಗೆ ಮಾಹಿತಿ ನೀಡಲಿಲ್ಲ. ಈ ಬಗ್ಗೆ ದೂರು ನೀಡಲು ದೂರು ಪುಸ್ತಿಕೆ ಕೇಳಿದರೆ ಸಿಬ್ಬಂದಿ ಅದನ್ನು ನೀಡದೇ ನಿರ್ಲಕ್ಷ್ಯ ಧೋರಣೆ ತೋರಿದರು. ಒಂದು ಸಣ್ಣ ಪೇಪರ್ ಚೂರಿನಲ್ಲಿ ನಾನು ದೂರು ಬರೆಯಬೇಕಾಯಿತು. ಸಿಬ್ಬಂದಿಯನ್ನು ಕೇಳಿದಾಗ ಅವರ ನಿರ್ಲಕ್ಷದ ನಡವಳಿಕೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ಟೀಕೆಗಳು ನನ್ನ ಕೋಪ ನೆತ್ತಿಗೇರುವಂತೆ ಮಾಡಿತು. ಹೀಗಾಗಿ ಥಳಿಸಿದೆ ಎಂದು ಗಾಯಕ್ವಾಡ್ ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಥಳಿತಕ್ಕೊಳಗಾದ ಸಿಬ್ಬಂದಿ ಸುಕುಮಾರ್ ರಮಣ್ ಅವರು ಹೇಳುವಂತೆ, ವಿಮಾನಕ್ಕೆ ಆಗಮಿಸುವ ಮುನ್ನವೇ ರವೀಂದ್ರ ಗಾಯಕ್ವಾಡ್ ಅವರು ಆಕ್ರೋಶ ಭರಿತರಾಗಿ ಬಂದಿದ್ದರು. ನಮ್ಮ ಯಾರ ಮಾತನ್ನೂ ಕೇಳುವ ಪರಿಸ್ಥಿತಿಯಲ್ಲಿ ಅವರು ಇರಲಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


