ರಾಷ್ಟ್ರಪತಿ ಹುದ್ದೆ ರೇಸ್ ನಲ್ಲಿ ಇಲ್ಲ: ಮೋಹನ್ ಭಾಗ್ವತ್
ತಾವು ರಾಷ್ಟ್ರಪತಿ ಹುದ್ದೆಯ ರೇಸ್ ನಲ್ಲಿ ಇಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್ )ನ ಮುಖ್ಯಸ್ಥ ಮೋಹನ್ ಭಾಗ್ವತ್ ಸ್ಪಷ್ಟನೆ ನೀಡಿದ್ದಾರೆ.

Published On :
ಮುಂಬೈ: ತಾವು ರಾಷ್ಟ್ರಪತಿ ಹುದ್ದೆಯ ರೇಸ್ ನಲ್ಲಿ ಇಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್ )ನ ಮುಖ್ಯಸ್ಥ ಮೋಹನ್ ಭಾಗ್ವತ್ ಸ್ಪಷ್ಟನೆ ನೀಡಿದ್ದಾರೆ.
ಮೋಹನ್ ಭಾಗ್ವತ್ ರಾಷ್ಟ್ರಪತಿಯಾಗಬೇಕೆಂಬ ಶಿವಸೇನೆ ಪಕ್ಷದ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೋಹನ್ ಭಾಗ್ವತ್, ರಾಷ್ಟ್ರಪತಿ ಹುದ್ದೆಯ ರೇಸ್ ನಲ್ಲಿ ನಾನು ಇಲ್ಲ. ನನ್ನ ಹೆಸರು ರಾಷ್ಟ್ರಪತಿ ಹುದ್ದೆಗೆ ಕೇಳಿಬರುತ್ತಿದೆ ಎಂದು ಒಂದಷ್ಟು ಮಾಧ್ಯಮಗಳು ವರದಿ ಮಾಡಿವೆ. ಆದರೆ ಅವು ಕೇವಲ ವದಂತಿಯಷ್ಟೇ, ನಾನು ಇರುವುದು ಆರ್ ಎಸ್ ಎಸ್ ನ ಕೆಲಸ ಮಾಡಲು ಅಷ್ಟೇ ಎಂದು ಮೋಹನ್ ಭಾಗ್ವತ್ ಹೇಳಿದ್ದಾರೆ.
ಒಂದು ವೇಳೆ ರಾಷ್ಟ್ರಪತಿ ಹುದ್ದೆಗೆ ನನ್ನ ಹೆಸರು ಸೂಚಿಸಿದರೂ ಅದನ್ನು ಒಪ್ಪುವುದಿಲ್ಲ ಎಂದು ಮೋಹನ್ ಭಾಗ್ವತ್ ಸ್ಪಷ್ಟನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Mohan Bhagwatಮೋಹನ್ ಭಾಗ್ವತ್ರಾಷ್ಟ್ರೀಯ ಸ್ವಯಂ ಸೇವಕ ಸಂಘRashtriya Swayamsewak Sanghpresident postರಾಷ್ಟ್ರಪತಿ ಹುದ್ದೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


